ಬುಧವಾರ, ಮೇ 25, 2022
29 °C

ನೂತನ ಸಿಇಸಿ ಸುನಿಲ್‌ ಅರೋರಾ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಸುನಿಲ್‌ ಅರೋರಾ ನೇಮಕಗೊಂಡಿದ್ದು ಡಿ. 2ರಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ಹೇಳಿವೆ.

ಈಗಿನ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್‌ ರಾವತ್‌ ಅವರು ಶನಿವಾರ ನಿವೃತ್ತರಾಗಲಿದ್ದಾರೆ. ಸುನಿಲ್‌ ಅವರ ನೇಮಕ ಕುರಿತು ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿದೆ.  2019ರ ಸಾರ್ವತ್ರಿಕ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ.

ಸುನಿಲ್‌ ನೇಮಕಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು ಹೆಸರನ್ನು ರಾಷ್ಟ್ರಪತಿ ಭವನಕ್ಕೆ ಕಳುಹಿಸಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಸುನಿಲ್‌ ಅವರು 2017ರ ಆ. 21ರಂದು ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು