ಬುಧವಾರ, ನವೆಂಬರ್ 13, 2019
21 °C
ಭೂಸ್ವಾಧೀನ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಲು ಒತ್ತಾಯ

ಅಭಿಯಾನ : ನ್ಯಾಯಮೂರ್ತಿ ಮಿಶ್ರಾ ಕಿಡಿ

Published:
Updated:

ನವದೆಹಲಿ: ಭೂಸ್ವಾಧೀನ ಕಾಯ್ದೆ ಅಡಿಯಲ್ಲಿ ಪರಿಹಾರ ನೀಡುವ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸಂವಿಧಾನ ಪೀಠದಿಂದ ಹಿಂದೆ ಸರಿಯುವಂತೆ ಒತ್ತಾಯಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರುಣ ಮಿಶ್ರಾ ಕಿಡಿಕಾರಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿರುವ ಲೇಖನಗಳನ್ನು ಪ್ರಸ್ತಾಪಿಸಿದ ಅವರು, ‘ನ್ಯಾಯಾಲಯದ ಘನತೆಗೆ ಧಕ್ಕೆ ಒದಗುವ ಪರಿಸ್ಥಿತಿ ಬಂದರೆ ತ್ಯಾಗ ಮಾಡುವ ವ್ಯಕ್ತಿಗಳಲ್ಲಿ ನಾನೇ ಮೊದಲಿಗನಾಗಿರುತ್ತೇನೆ. ನಾನು ಯಾರ ಪ್ರಭಾವಕ್ಕೂ ಒಳಗಾಗಿಲ್ಲ. ಈ ಭೂಮಿ ಮೇಲಿನ ಯಾವುದೇ ವಸ್ತು ಅಥವಾ ವ್ಯಕ್ತಿಯ ಆಮಿಷ ಕ್ಕೂ ಒಳಗಾಗುವುದಿಲ್ಲ’ ಎಂದರು.

ಪ್ರತಿಕ್ರಿಯಿಸಿ (+)