ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ನಲ್ಲಿ ಮದ್ಯ ಮಾರಾಟ, ಹೋಮ್‌ ಡೆಲಿವರಿ ವ್ಯವಸ್ಥೆ ಬಗ್ಗೆ ‘ಸುಪ್ರೀಂ’ ಸಲಹೆ

Last Updated 8 ಮೇ 2020, 20:29 IST
ಅಕ್ಷರ ಗಾತ್ರ

ನವದೆಹಲಿ: ಮದ್ಯದ ಅಂಗಡಿಗಳ ಮುಂದೆ ಜನದಟ್ಟಣೆಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆನ್‌ಲೈನ್‌ ಮಾರಾಟ ಮತ್ತು ಹೋಮ್‌ ಡೆಲಿವರಿ ವ್ಯವಸ್ಥೆ ಜಾರಿಗೊಳಿಸುವುದನ್ನು ರಾಜ್ಯ ಸರ್ಕಾರಗಳು ‍ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಅಂಗಡಿಗಳ ಮೂಲಕ ನೇರ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿ ಗೃಹ ಸಚಿವಾಲಯ ಮೇ 1ರಂದು ಹೊರಡಿಸಿದ ನಿರ್ದೇಶನಗಳನ್ನು ಪ್ರಶ್ನಿಸಿ ಗುರುಸ್ವಾಮಿ ನಟರಾಜ್‌ ಎನ್ನುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ಸೂಚನೆ ನೀಡಿದೆ.

‘ಮದ್ಯ ಖರೀದಿಸುವಾಗ ಜನರು ಅಂತರ ಕಾಪಾಡದ ಕಾರಣ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿವೆ’ ಎಂದು ಅರ್ಜಿದಾರರ ಪರ ವಕೀಲ ದೀಪಕ್‌ ವಾದ ಮಂಡಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದನ್ಯಾಯಮೂರ್ತಿಗಳಾದ ಅಶೋಕ್‌ ಭೂಷನ್‌, ಸಂಜಯ್‌ ಕಿಶನ್‌ ಕೌಲ್‌ ಮತ್ತು ಬಿ.ಆರ್‌. ಗವಾಯಿ ಅವರನ್ನೊಳಗೊಂಡ ಪೀಠ, ‘ಹೋಮ್‌ ಡೆಲಿವರಿ ಅಥವಾ ಆನ್‌ಲೈನ್‌ ಮಾರಾಟದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರಗಳು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು’ ಎಂದು ಸೂಚಿಸಿತು.

ತಮಿಳುನಾಡಿನಲ್ಲಿ ಮದ್ಯದಂಗಡಿ ಬಂದ್‌
ಚೆನ್ನೈ: ತಮಿಳುನಾಡಿನಾದ್ಯಂತ ಇರುವ ಸರ್ಕಾರಿ ಸ್ವಾಮ್ಯದ ಮದ್ಯದಂಗಡಿಗಳನ್ನು ಮುಚ್ಚಲು ಮದ್ರಾಸ್‌ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

ಮದ್ಯ ಮಾರಾಟದ ವೇಳೆ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದೇ ಇರುವ ಕಾರಣ ನ್ಯಾಯಪೀಠವು ಈ ಸೂಚನೆ ನೀಡಿದೆ. ಆದರೆ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಮದ್ಯ ಸರಬರಾಜಿಗೆ ಅವಕಾಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT