ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ್–ಹಿಕಾರು ಪಂದ್ಯ ಡ್ರಾ

Last Updated 30 ಮೇ 2018, 19:30 IST
ಅಕ್ಷರ ಗಾತ್ರ

ಸ್ಟಾವೆಂಜರ್‌, ನಾರ್ವೆ: ಭಾರತದ ಗ್ರ್ಯಾಂಡ್‌ಮಾಸ್ಟರ್‌ ವಿಶ್ವನಾಥನ್‌ ಆನಂದ್‌ ಅವರು ಅಲ್ಟಿ ಬಾಕ್ಸ್‌ ನಾರ್ವೆ ಚೆಸ್‌ ಟೂರ್ನಿಯ ಎರಡನೇ ಸುತ್ತಿನಲ್ಲಿ ಡ್ರಾ ಮಾಡಿಕೊಂಡಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ಆನಂದ್‌ ಅವರು ಅಮೆರಿಕದ ಹಿಕಾರು ನಕಮುರಾ ಅವರೊಂದಿಗೆ ಪಾಯಿಂಟ್‌ ಹಂಚಿಕೊಂಡರು. 

ಪಂದ್ಯದ ಆರಂಭದಿಂದಲೂ ಇಬ್ಬರು ಆಟಗಾರರು ಚುರುಕಾಗಿ ಕಾಯಿಗಳನ್ನು ಮುನ್ನಡೆಸಿದರು. ಒಂದು ಹಂತದಲ್ಲಿ ಹಿಕಾರು ಅವರ ತಂತ್ರದಿಂದ ಆನಂದ್‌ ಒತ್ತಡಕ್ಕೆ ಸಿಲುಕಿದರು. ಆದರೆ, ಕೂಡಲೇ ಎಚ್ಚೆತ್ತ ಆನಂದ್‌ ಅವರು ಪ್ರತಿತಂತ್ರ ಹೆಣೆಯುವಲ್ಲಿ ಯಶಸ್ವಿಯಾಗಿ ಪಾಯಿಂಟ್‌ ಗಿಟ್ಟಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT