ಭಾನುವಾರ, ಮೇ 31, 2020
27 °C

ನಾಗೇಶ್ವರ ರಾವ್ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸ್ವೀಕರಿಸಿದ ಸುಪ್ರೀಂಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಎಂ.ನಾಗೇಶ್ವರ ರಾವ್ ಅವರನ್ನು ಮಧ್ಯಂತರ ನಿರ್ದೇಶಕರಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಸ್ವೀಕರಿಸಿದೆ. ಈ ಅರ್ಜಿ ವಿಚಾರಣೆ ಮುಂದಿನ ವಾರ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ. ಪ್ರಶಾಂತ್ ಭೂಷಣ್ ಅರ್ಜಿದಾರರ ಪರವಾಗಿ ವಾದಿಸಲಿದ್ದಾರೆ. ಶುಕ್ರವಾರ ಈ ಅರ್ಜಿ ಪರಿಗಣಿಸಬೇಕೆಂದು ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರೂ, ಅದು ಸಾಧ್ಯವಿಲ್ಲ, ಮುಂದಿನ ವಾರ ಪರಿಗಣಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಎನ್‍ಜಿಒ ಮತ್ತು ಆರ್‌ಟಿಐ ಕಾರ್ಯಕರ್ತೆಯಾಗಿರುವ ಅಂಜಲಿ ಭಾರದ್ವಾಜ್ ಅವರು ನಾಗೇಶ್ವರ್ ರಾಮ್ ನೇಮಕ ಪ್ರಶ್ನಿಸಿ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಇದನ್ನೂ ಓದಿಸಿಬಿಐಗೆ ಎಂ.ನಾಗೇಶ್ವರ ರಾವ್‌ ನೇಮಕ ಅಕ್ರಮ: ಮಲ್ಲಿಕಾರ್ಜುನ ಖರ್ಗೆ ಆರೋಪ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು