ಭಾನುವಾರ, ಏಪ್ರಿಲ್ 5, 2020
19 °C

ಪಡಿತರ ಜೊತೆ ಆಧಾರ್ ಲಿಂಕ್: ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ:ಪಡಿತರ ಚೀಟಿಗೆ ಆಧಾರ್ ಲಿಂಕ್ ಆಗದಿದ್ದರೆ, ಪಡಿತರ ನೀಡದಿರುವ ಕುರಿತು ರಾಷ್ಟ್ರದ ಎಲ್ಲಾ ರಾಜ್ಯಗಳೂ ಹಾಗೂ ಕೇಂದ್ರಾಡಳಿತ ಪ್ರದೇಶಗಳೂ ತಮ್ಮ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸೋಮವಾರ ಸೂಚನೆ ನೀಡಿದೆ.

ಇದು ಎರಡನೆ ಬಾರಿಗೆ ನೀಡುತ್ತಿರುವ ಸೂಚನೆಯಾಗಿದ್ದು, ನಾಲ್ಕು ವಾರಗಳ ಹಿಂದೆ ಪ್ರತಿಕ್ರಿಯೆ ಕೇಳಿ ನೋಟೀಸ್ ಜಾರಿ ಮಾಡಿತ್ತು.
ಆದರೆ, ಜಾರ್ಖಂಡ್, ನಾಗಾಲ್ಯಾಂಡ್ ಮತ್ತು ತಮಿಳುನಾಡು ಬಿಟ್ಟರೆ ಬೇರೆ ಯಾವುದೇ ರಾಜ್ಯಗಳು ಪ್ರತಿಕ್ರಿಯೆ ನೀಡಿಲ್ಲ. ಆಧಾರ್ ಕಾರ್ಡ್ ಜೊತೆ ಪಡಿತರ ಚೀಟಿ ಲಿಂಕ್ ಮಾಡದಿದ್ದರೆ, ಆಹಾರ ಪದಾರ್ಥಗಳನ್ನು ನಿರಾಕರಿಸಿದ್ದರಿಂದ ಉತ್ತರ ಭಾರತದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು. ಕೆಲವು ಕಡೆ ಸಾವು ಸಂಭವಿಸಿದ್ದು ವರದಿಯಾಗಿತ್ತು.

ಇದನ್ನೂ ಓದಿ: ಬಯೋಮೆಟ್ರಿಕ್ ಯಂತ್ರ ಇಲ್ಲದೆ ಪಡಿತರ ನೀಡದ ಕಾರಣ: ಹಸಿವಿನಿಂದ ವೃದ್ಧ ಸಾವು

ಈ ಕುರಿತು ಸುಪ್ರೀಂಕೋರ್ಟ್‌‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸೋಮವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪಡಿತರ ನೀಡುವ ಕುರಿತು ಯಾವ ಕ್ರಮ ಕೈಗೊಂಡಿದ್ದೀರಿ ಎಂಬುದರ ಕುರಿತು ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು