ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೂತ್ತುಕುಡಿ: ತಾಮ್ರ ಘಟಕ ಆರಂಭಕ್ಕೆ ‘ಸುಪ್ರೀಂ’ ಅನುಮತಿ

Last Updated 8 ಜನವರಿ 2019, 19:49 IST
ಅಕ್ಷರ ಗಾತ್ರ

ನವದೆಹಲಿ: ತೂತ್ತುಕುಡಿಯಲ್ಲಿನ ವೇದಾಂತ ಕಂಪನಿಯ ತಾಮ್ರ ಸಂಸ್ಕರಣಾ ಘಟಕವನ್ನು ಮುಚ್ಚುವ ತಮಿಳುನಾಡು ಸರ್ಕಾರದ ನಿರ್ಧಾರವನ್ನು ತಳ್ಳಿಹಾಕಿದ್ದ ಹಸಿರು ನ್ಯಾಯಮಂಡಳಿಯ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಘಟಕದ ಪುನರಾರಂಭಕ್ಕೆ ಅನುಮತಿ ನೀಡಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶಕ್ಕೆ ತಡೆಯಾಜ್ಞೆ ವಿಧಿಸಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ನ್ಯಾಯಮೂರ್ತಿ ಆರ್‌.ಎಫ್.ನರಿಮನ್ ನೇತೃತ್ವದ ನ್ಯಾಯಪೀಠ, ರಾಜ್ಯ ಸರ್ಕಾರದ ಈ ಮನವಿ ಕುರಿತು ಪ್ರತಿಕ್ರಿಯೆ ನೀಡುವಂತೆ ವೇದಾಂತ ಕಂಪನಿಗೆ ಸೂಚಿಸಿದೆ.

ಪರಿಸರ ಮಾಲಿನ್ಯದ ಕಾರಣದಿಂದಾಗಿ ಇಲ್ಲಿನ ಘಟಕ ಕಾರ್ಯ ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಬಳಿಕ, ಘಟಕವನ್ನು ಮುಚ್ಚುವಂತೆ ತಮಿಳುನಾಡು ಸರ್ಕಾರದ ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎನ್‌ಪಿಸಿಬಿ) ಆದೇಶಿಸಿತ್ತು.

ಆದರೆ ಈ ಆದೇಶವನ್ನು ತಳ್ಳಿಹಾಕಿದ್ದ ಎನ್‌ಜಿಟಿ, ಘಟಕದ ಪುನರಾರಂಭಕ್ಕೆ ಅನುಮತಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT