ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಗಳ ಅಪರಾಧದ ಬಗ್ಗೆ ಎಚ್ಚರ ವಹಿಸಿ: ಸುಪ್ರೀಂ ಕೋರ್ಟ್‌

Last Updated 31 ಜನವರಿ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಅಪರಾಧ ಹಿನ್ನೆಲೆಯನ್ನು ಬಹಿರಂಗಪಡಿಸದ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಾಗ ಎಚ್ಚರವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

ರಾಜಕೀಯ ಉದ್ದೇಶದಿಂದ ‘ದೇಶದ್ರೋಹ’ ಮತ್ತು ‘ರಾಷ್ಟ್ರ ವಿರೋಧಿ’ ಆರೋಪಗಳನ್ನು ಪದೇ ಪದೇ ಮಾಡುವುದರಿಂದ ಇಂತಹ ಪ್ರಕರಣಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ನ್ಯಾಯಮೂರ್ತಿ ಆರ್‌.ಎಫ್‌. ನಾರಿಮನ್‌ ಮತ್ತು ಎಸ್‌. ರವೀಂದ್ರ ಭಟ್‌ ಅವರನ್ನೊಳಗೊಂಡ ಪೀಠವು ಹೇಳಿದೆ.

ಅಪರಾಧ ಹಿನ್ನೆಲೆಯನ್ನು ಬಹಿರಂಗಪಡಿಸುವ ಕುರಿತು ಸುಪ್ರಿಂ ಕೋರ್ಟ್‌ 2018ರ ಸೆಪ್ಟೆಂಬರ್‌ 25ರಂದು ನೀಡಿರುವ ತೀರ್ಪು ಪಾಲಿಸುತ್ತಿಲ್ಲ ಎಂದು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ವಿವರ ನೀಡಿದ ಚುನಾವಣಾ ಆಯೋಗವು, ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿರುವ ಸಂಸದರ ಸಂಖ್ಯೆ ಹೆಚ್ಚುತ್ತಿದೆ. ಶೇಕಡ 43ರಷ್ಟು ಸಂಸದರು ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT