ಗುರುವಾರ , ಜೂನ್ 24, 2021
23 °C
ಉಚಿತ ಸಾರಿಗೆ ಸೌಲಭ್ಯ ನೀಡಿ

ಕಾಲಮಿತಿಯಲ್ಲಿ ವಲಸಿಗರನ್ನು ಊರಿಗೆ ತಲುಪಿಸಿ: ಸುಪ್ರೀಂ ಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಲಸೆ ಕಾರ್ಮಿಕರು–ಸಂಗ್ರಹ ಚಿತ್ರ

ನವದೆಹಲಿ: ಲಾಕ್‌ಡೌನ್‌ನಿಂದಾಗಿ ದೇಶದ ವಿವಿಧೆಡೆ ಸಮಸ್ಯೆಗೆ ಸಿಲುಕಿರುವ ವಲಸೆ ಕಾರ್ಮಿಕರನ್ನು ನಿಗದಿತ ಸಮಯದಲ್ಲಿ ಅವರ ಊರುಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಎಲ್ಲ ವಲಸೆ ಕಾರ್ಮಿಕರನ್ನು 15 ದಿನಗಳಲ್ಲಿ ಮನೆಗೆ ತಲುಪಿಸಬೇಕು ಎಂದು ಆದೇಶಿಸಿ ಈ ಹಿಂದೆ ನೀಡಲಾದ ಕಾಲಮಿತಿ ಪಾಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಸಂಜಯ್ ಕಿಶನ್‌ ಕೌಲ್ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠ ಹೇಳಿದೆ.

ವಲಸಿಗರನ್ನು ಸುರಕ್ಷಿತವಾಗಿ ತಲುಪಿಸುವಂತೆ ಸೂಚಿಸಲಾದ ತನ್ನ ಆದೇಶದ ಬಗ್ಗೆ ಸಾಕಷ್ಟು ಪ್ರಚಾರ ನೀಡಬೇಕು ಎಂದೂ ಪೀಠ ಇದೇ ವೇಳೆ ಮತ್ತೊಮ್ಮೆ ಸೂಚಿಸಿದೆ.

ಅಲ್ಲಲ್ಲಿ ಸಿಲುಕಿಕೊಂಡ ವಲಸೆ ಕಾರ್ಮಿಕರು ಸಮಸ್ಯೆ ಎದುರಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ಕಾರ್ಮಿಕರು ಉಚಿತವಾಗಿ ಮನೆಗೆ ಹಿಂತಿರುಗಲು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಗಳಿಗೆ ಹೇಳಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು