ಶಬರಿಮಲೆಗೆ ಮಹಿಳೆ ಪ್ರವೇಶ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

7
ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ

ಶಬರಿಮಲೆಗೆ ಮಹಿಳೆ ಪ್ರವೇಶ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

Published:
Updated:
Deccan Herald

ನವದೆಹಲಿ: ಎಲ್ಲ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಾಲಯಕ್ಕೆ ಅನುಮತಿ ನೀಡಿದ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಸಲ್ಲಿಸಿರುವ ತುರ್ತು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ತಳ್ಳಿಹಾಕಿದೆ.

‘ಎಲ್ಲ ವಯಸ್ಸಿನ ಮಹಿಳೆಯರಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡುವ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ನೀಡಿದ ತೀರ್ಪು ಅವೈಜ್ಞಾನಿಕ ಮತ್ತು ಆಧಾರರಹಿತ. ತೀರ್ಪಿನ ಮರುಪರಿಶೀಲನೆ ಮಾಡಬೇಕು’ ಎಂದು ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘದ (ನ್ಯಾಷನಲ್ ಅಯ್ಯಪ್ಪ ಡಿವೋಟಿಸ್ ಅಸೋಸಿಯೇಷನ್) ಅಧ್ಯಕ್ಷೆ ಶೈಲಜಾ ವಿಜಯನ್ ಅವರು ವಕೀಲ ಮ್ಯಾಥ್ಯೂ ಜೆ.ನೆಡುಂಪರಾ ಅವರ ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಅಂಗೀಕರಿಸಿತು.

‘ನಿಮ್ಮ ವಾದವನ್ನು ನಾವು ಆಲಿಸಿದ್ದೇವೆ. ನಿಮ್ಮ ಅರ್ಜಿಯು ಯಾದಿ ಪ್ರಕಾರ ವಿಚಾರಣೆಗೆ ಬರಲಿದೆ’ಎಂದು ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹೇಳಿದರು.

ಇದನ್ನೂ ಓದಿ: ಶಬರಿಮಲೆಗೆ ಹೆಂಗಸರು ಹೋಗಬಾರದು ಎನ್ನುವ ನಿಷೇಧ ನಿಜಕ್ಕೂ ಪ್ರಾಚೀನವೇ?

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !