ಸೋಮವಾರ, ಡಿಸೆಂಬರ್ 9, 2019
20 °C
ಇ.ಡಿ.ಗೆ ನೋಟಿಸ್

ಚಿದಂಬರಂಗಿಲ್ಲ ರಿಲೀಫ್: ಜಾಮೀನು ಅರ್ಜಿ ವಿಚಾರಣೆ 26ಕ್ಕೆ ಮುಂದೂಡಿದ ಸುಪ್ರೀಂ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಪಿ.ಚಿದಂಬರಂ

ನವದೆಹಲಿ: ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಸುಪ್ರೀಂ ಕೋರ್ಟ್ ಬುಧವಾರ ನೋಟಿಸ್ ನೀಡಿದೆ.

ಐಎನ್‌ಎಕ್ಸ್ ಮೀಡಿಯಾ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂದಿಸಿ ಚಿದಂಬರಂ ಸಲ್ಲಿಸುವ ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ಇದೇ 26ಕ್ಕೆ ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ. ಜಾಮೀನು ತಿರಸ್ಕರಿಸಿ ದೆಹಲಿ ಹೈಕೋರ್ಟ್ ಈಚೆಗೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇ.ಡಿ. ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದರೆ, ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ‍್ರಕರಣದಲ್ಲಿ ಜಾಮೀನು ದೊರೆತಿರುವುದರಿಂದ ಅವರು ಜೈಲಿನಲ್ಲೇ ಇರಬೇಕಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು