ಬುಧವಾರ, ಜನವರಿ 22, 2020
24 °C

347 ಕ್ಷೇತ್ರಗಳ ಮತಗಳಲ್ಲಿ ವ್ಯತ್ಯಾಸ: ಚುನಾವಣಾ ಆಯೋಗಕ್ಕೆ ‘ಸುಪ್ರೀಂ’ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ 347 ಕ್ಷೇತ್ರಗಳಲ್ಲಿ, ಆದ ಮತದಾನ ಹಾಗೂ ಎಣಿಕೆಯಾದ ಮತಗಳಲ್ಲಿನ ವ್ಯತ್ಯಾಸದ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ(ಇಸಿಐ)ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ. 

ಮತಗಳಲ್ಲಿನ ವ್ಯತ್ಯಾಸದ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌(ಎಡಿಆರ್‌) ಮತ್ತು ಕಾಮನ್‌ ಕಾಸ್‌ ಹೆಸರಿನ ಎರಡು ಸರ್ಕಾರೇತರ ಸಂಸ್ಥೆಗಳು (ಎನ್‌ಜಿಒ) ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರಿದ್ದ ನ್ಯಾಯಪೀಠ, ಫೆಬ್ರುವರಿ 2020ರಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ಇದೇ ವಿಚಾರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಇದೇ ಅವಧಿಯಲ್ಲಿ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿತು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು