ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶದಲ್ಲಿ ನಾಳೆಯೇ ವಿಶ್ವಾಸಮತ ನಡೆಯಬೇಕು: ಸುಪ್ರೀಂ ಕೋರ್ಟ್‌ 

Last Updated 19 ಮಾರ್ಚ್ 2020, 13:09 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಪ್ರದೇಶದಲ್ಲಿ ಶುಕ್ರವಾರವೇಬಹುಮತ ಸಾಬೀತು ಪ್ರಕ್ರಿಯೆ ನಡೆಯಬೇಕು. ಸಂಜೆ 5ರ ಒಳಗಾಗಿ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಗುರುವಾರ ಸೂಚಿಸಿದೆ.

ಶಾಸಕರು ಸದನದಲ್ಲಿ ಕೈ ಎತ್ತಿ ಪ್ರದರ್ಶಿಸುವ ಮೂಲಕ ಮತದಾನ ಪ್ರಕ್ರಿಯೆ ನಡೆಯಬೇಕುಎಂದೂ ಸುಪ್ರೀಂ ಕೋರ್ಟ್‌ ಹೇಳಿದೆ.

ಬಹುಮತ ಸಾಬೀತುಪಡಿಸುವ ಇಡೀ ಪ್ರಕ್ರಿಯೆ ವಿಡಿಯೊ ಚಿತ್ರೀಕರಣವಾಗಬೇಕು ಎಂದು ಕೋರ್ಟ್‌ ಸೂಚಿಸಿತು.

ಕರ್ನಾಟಕ ಮತ್ತು ಮಧ್ಯಪ್ರದೇಶ ಪೊಲೀಸರು ಬಂಡಾಯ ಶಾಸಕರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. ಯಾವುದೇ ಅಗತ್ಯಗಳಿದ್ದರೆ ಪೂರೈಸಬೇಕು. ಬಹುಮತ ಸಾಬೀತು ಪ್ರಕ್ರಿಯೆ ನಡೆಯುವಾಗ ಯಾವುದೇ ಕಾನೂನುಗಳ ಉಲ್ಲಂಘನೆಯಾಗಬಾರದು. ಇಡೀ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಬೇಕು ಎಂದೂ ಕೋರ್ಟ್‌ ತಿಳಿಸಿದೆ.

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರ 22 ಬೆಂಬಲಿಗ ಶಾಸಕರು ಮುಖ್ಯಮಂತ್ರಿ ಕಮಲನಾಥ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಂಡೆದ್ದಿದ್ದಾರೆ. ಈಗಾಗಲೇ 6 ಮಂದಿ ಶಾಸಕರ ರಾಜೀನಾಮೆ ಅಂಗೀಕಾರವಾಗಿದೆ.

ಹೀಗಾಗಿ ಕಮಲನಾಥ್‌ ಸರ್ಕಾರ ಬಹುಮತ ಕಳೆದುಕೊಂಡಿದೆ ಎಂದು ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಪಟ್ಟು ಹಿಡಿದಿದೆ. ಕಮಲನಾಥ್‌ ಅವರು ಬಹುಮತ ಸಾಬೀತು ಮಾಡಬೇಕು ಎಂದು ರಾಜ್ಯಪಾಲರೂ ಸೂಚಿಸಿದ್ದಾರೆ.

ವಿರೋಧ ಪಕ್ಷದ ಒತ್ತಾಯ ಮತ್ತು ರಾಜ್ಯಪಾಲರ ಆದೇಶಗಳ ಹೊರತಾಗಿಯೂ ಸ್ಪೀಕರ್‌ ವಿಧಾನಸಭೆಯನ್ನು ಮುಂದೂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದ ಬಿಜೆಪಿ, ‘ಮುಖ್ಯಮಂತ್ರಿ ಕಮಲನಾಥ್‌ ಅವರ ಸರ್ಕಾರ ಸಂಖ್ಯಾಬಲಕಳೆದುಕೊಂಡಿದ್ದು, ಕೂಡಲೇ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಲು ಸೂಚಿಸಬೇಕು,’ ಎಂದು ಕೋರಿಕೆ ಸಲ್ಲಿಸಿತ್ತು.

ಬಂಡಾಯ ಶಾಸಕರು ಬೆಂಗಳೂರಿನ ರೆಸಾರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT