ಗುರುವಾರ , ಆಗಸ್ಟ್ 5, 2021
23 °C

ಪಾಲ್‌ಘರ್ ಗುಂಪು ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾರಾಷ್ಟ್ರದ ಪಾಲ್‌ಘರ್ ಜಿಲ್ಲೆಯಲ್ಲಿ ನಡೆದಿದ್ದ ಇಬ್ಬರು ಹಿಂದೂ ಸಾಧುಗಳು ಸೇರಿದಂತೆ ಮೂವರ ಹತ್ಯೆ ಪ್ರಕರಣದ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. 

ಜೆ. ಅಶೋಕ್‌ ಭೂಷಣ್‌ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠವು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಏಪ್ರಿಲ್‌‌ ಕೊನೆಯ ವಾರದಲ್ಲಿ, ಮಹಾರಾಷ್ಟ್ರದ ಪಾಲ್‌ಘರ್ ಜಿಲ್ಲೆಯಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಜನರ ಗುಂಪೊಂದು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿತ್ತು. 

ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ಸಿಐಡಿಗೆ ವಹಿಸಿತ್ತು. 

ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿಲ್ಲ. ರಾಜ್ಯ ಸರ್ಕಾರದ ತನಿಖಾ ವಿಧಾನಗಳು ಪೂರ್ವಾಗ್ರಹಗಳಿಂದ ಕೂಡಿವೆ. ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವಹಿಸಬೇಕೆಂದು ಹತ್ಯೆಯಾದ ಸಾಧುಗಳ ಸಂಬಂಧಿಕರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. 

ನ್ಯಾಯಮೂರ್ತಿಗಳಾದ ಜೆ.ಅಶೋಕ್‌ ಭೂಷಣ್‌‌, ಎಂ.ಆರ್‌.ಶಾ ಮತ್ತು ವಿ.ರಾಮಸುಬ್ರಮಣಿಯನ್‌ ಅವರನ್ನು ಒಳಗೊಂಡ ನ್ಯಾಯಪೀಠವು ಈ ಬಗ್ಗೆ ವಿಚಾರಣೆಯನ್ನು ನಡೆಸಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು