ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಭಯಾ ಪ್ರಕರಣ: ಅಪರಾಧಿ ಅಕ್ಷಯ್‌ ಪರಿಹಾರಾತ್ಮಕ ಅರ್ಜಿ ವಜಾಗೊಳಿಸಿದ 'ಸುಪ್ರೀಂ'

Last Updated 30 ಜನವರಿ 2020, 11:12 IST
ಅಕ್ಷರ ಗಾತ್ರ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಅಪರಾಧಿ ಅಕ್ಷಯ್‌ ಕುಮಾರ್ ಸಲ್ಲಿಸಿದ್ದ ಪರಿಹಾರಾತ್ಮಕ (ಕ್ಯುರೇಟಿವ್​) ಅರ್ಜಿಯನ್ನು ಸುಪ್ರೀಂ ಕೋರ್ಟ್‌ಗುರುವಾರ ವಜಾಗೊಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್​.ವಿ. ರಮಣ, ಅರುಣ್​ ಮಿಶ್ರಾ, ಆರ್​.ಎಫ್​. ನಾರಿಮನ್​, ಆರ್​. ಭಾನುಮತಿ ಮತ್ತು ಅಶೋಕ್​ ಭೂಷಣ್​ ಅವರನ್ನೊಳಗೊಂಡಪೀಠವು,‘ಮೌಖಿಕ ವಿಚಾರಣೆ ಹಾಗೂ ಗಲ್ಲು ಶಿಕ್ಷೆ ಜಾರಿ ಆದೇಶಕ್ಕೆ ತಡೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಮಾಡಲಾಗಿದೆ’ ಎಂದು ತಿಳಿಸಿದೆ.

‘ಅಪರಾಧಿ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿ ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಾವು ಪರಿಶೀಲಿಸಿದೆವು. ಆದರೆ, ಪೀಠದ ಪರಿಮಿತಿಗೆ ಒಳಪಡುವ ಯಾವುದೇ ಅಂಶವನ್ನು ಅರ್ಜಿ ಒಳಗೊಂಡಿಲ್ಲ’ ಎಂದು ನ್ಯಾಯಪೀಠ ವಿವರಿಸಿದೆ.

ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗೆ ಕಾನೂನಿನ ಅಡಿಯಲ್ಲಿ ಇರುವ ಕೊನೆಯ ಅವಕಾಶವೆಂದರೆ ಅದು ಪರಿಹಾರಾತ್ಮಕ ಅರ್ಜಿ. ಇದೀಗ ಅರ್ಜಿ ತಿರಸ್ಕಾರವಾಗಿದ್ದು, ಉಳಿದಿರುವ ಅವಕಾಶವೆಂದರೆ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿ ಸಲ್ಲಿಸುವುದು.

ಅಪರಾಧಿಗಳನ್ನು ಫೆಬ್ರುವರಿ 1ರಂದು ಬೆಳಿಗ್ಗೆ 6 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ಇತ್ತೀಚೆಗೆ ವಾರಂಟ್ ಜಾರಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT