ಭಾನುವಾರ, ಏಪ್ರಿಲ್ 5, 2020
19 °C

ಸೇನೆಯಲ್ಲಿ ಮಹಿಳೆಯರಿಗೆ ಕಮಾಂಡ್ ಹುದ್ದೆ ನೀಡಿ: ಸುಪ್ರೀಂ ಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Supreme court

ನವದೆಹಲಿ: ಮಹಿಳೆಯರಿಗೆ ಸೇನೆಯಲ್ಲಿ ಕಮಾಂಡ್‌ ಹುದ್ದೆ ನೀಡಲು ದೈಹಿಕ ಸಾಮರ್ಥ್ಯ ಮತ್ತು ಸಾಮಾಜಿಕ ಕಾರಣಗಳು ಅಡ್ಡಿ ಎಂಬ ಕೇಂದ್ರ ಸರ್ಕಾರದ ವಾದ ಗೊಂದಲದಿಂದ ಕೂಡಿದೆ. ಮಹಿಳೆಯರಿಗೆ ಕಮಾಂಡ್ ಹುದ್ದೆ ನೀಡುವುಕ್ಕೆ ಯಾವುದೇ ತಡೆ ಇಲ್ಲ ಎಂದು ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಹೇಳಿದೆ.

‘ಈ ಹಿಂದೆ ಮಹಿಳಾ ಅಧಿಕಾರಿಗಳು ದೇಶಕ್ಕೆ ಕೀರ್ತಿ ತಂದಿದ್ದಾರೆ. ಸಶಸ್ತ್ರಪಡೆಗಳಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರದ ಕಡೆಯಿಂದ ಮನಸ್ಥಿತಿ ಬದಲಾಗಬೇಕಿದೆ’ ಎಂದು ನ್ಯಾಯಪೀಠ ಹೇಳಿದೆ.

ಮಹಿಳಾ ಅಧಿಕಾರಿಗಳಿಗೆ ಕಾಯಂ ಸೇವೆ (ಪರ್ಮನೆಂಟ್‌ ಕಮಿಷನ್‌) ಅವಕಾಶ ನೀಡುವಂತೆ 2010ರಲ್ಲಿ ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪಿಗೆ ತಡೆ ಇಲ್ಲದ ಹೊರತಾಗಿಯೂ ಅದನ್ನು ಅನುಷ್ಠಾನಕ್ಕೆ ತರುವುದನ್ನು ಕೇಂದ್ರ ಸರ್ಕಾರ ಕಡೆಗಣಿಸಿದೆ ಎಂದು ಸರ್ವೋಚ್ಚ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಮಹಿಳಾ ಅಧಿಕಾರಿಗಳ ತೊಡಗಿಸಿಕೊಳ್ಳುವಿಕೆಯು ವಿಕಸನ ಪ್ರಕ್ರಿಯೆಯಾಗಿದ್ದು, ದೆಹಲಿ ಹೈಕೋರ್ಟ್‌ ತೀರ್ಪಿಗೆ ಅನುಗುಣವಾಗಿ ಸರ್ಕಾರ ನಡೆದುಕೊಳ್ಳಬೇಕಾಗಿತ್ತು ಎಂದೂ ಹೇಳಿದೆ.

ಏನಿದು ಕಾಯಂ ಸೇವೆ?: ಸೇನೆಯಲ್ಲಿ ನಿವೃತ್ತಿಯಾಗುವವರೆಗೂ ಸೇವೆ ಸಲ್ಲಿಸಲು ಅವಕಾಶ ದೊರೆಯಲಿದೆ. ಅಂದರೆ, ಕಾಯಂ ಸೇವೆ (ಪರ್ಮನೆಂಟ್‌ ಕಮಿಷನ್‌) ಮೂಲಕ ಆಯ್ಕೆಯಾದರೆ ಈಗ ನಿಗದಿಪಡಿಸಿರುವ ನಿವೃತ್ತಿ ವಯಸ್ಸು 60 ವರ್ಷಗಳವರೆಗೂ ಕಾರ್ಯನಿರ್ವಹಿಸುವ ಅವಕಾಶ ಲಭಿಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು