ಗುರುವಾರ , ಜುಲೈ 29, 2021
21 °C

ಆಧಾರ್‌: ಜೂನ್‌ 9ರಂದು ಸುಪ್ರೀಂನಿಂದ ಮರುಪರಿಶೀಲನಾ ಅರ್ಜಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಧಾರ್‌ ಸಹ ಸಾಂವಿಧಾನಿಕ ಸಿಂಧುತ್ವ ಹೊಂದಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಜೂನ್‌ 9ರಂದು ಕೈಗೆತ್ತಿಕೊಳ್ಳಲಿದೆ.

ಮಕ್ಕಳ ಹಕ್ಕುಗಳ ಸಮಿತಿಯ ಮಾಜಿ ಮುಖ್ಯಸ್ಥೆ ಶಾಂತಾ ಸಿನ್ಹಾ ಅವರು ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಕ್ಲರ್‌, ಡಿ.ವೈ.ಚಂದ್ರಚೂಡ್, ಅಶೋಕ್‌ ಭಾನ್‌ ಹಾಗೂ ಎಲ್‌.ನಾಗೇಶ್ವರರಾವ್‌ ಅವರನ್ನು ಒಳಗೊಂಡ ಸಾಂವಿಧಾನಿಕ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.

‘ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದ ವ್ಯಾಖ್ಯಾನಕ್ಕೆ ಸಂಬಂಧಿಸಿದಂತೆ ಮಹತ್ವದ ವಿಷಯಗಳಿವೆ. ಹೀಗಾಗಿ ಮೌಖಿಕವಾಗಿ, ಕೋರ್ಟ್‌ನಲ್ಲಿ ಮುಕ್ತವಾಗಿ ಹೇಳಿಕೆ ದಾಖಲಿಸಲು ಅನುಮತಿ ನೀಡಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.

2019ರಲ್ಲಿ ಈ ವಿಷಯವಾಗಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‌, ‘ನಾಗರಿಕರ ಖಾಸಗಿತನ ಹಾಗೂ ಗೌರವ ಕಾಪಾಡುವ ದೃಷ್ಟಿಯಿಂದ ಆಧಾರ್‌ ವಿತರಿಸುವ ಕಾರ್ಯಕ್ರಮ ಸಮತೋಲದಿಂದ ಕೂಡಿದೆ' ಎಂದು ಅಭಿಪ್ರಾಯಪಟ್ಟಿತ್ತು.

‘ಕೋಟ್ಯಂತರ ಅರ್ಹ ನಾಗರಿಕರಿಗೆ ಸರ್ಕಾರದ ಸವಲತ್ತುಗಳು ಈ ಕಾರ್ಯಕ್ರಮದಿಂದಾಗಿ ಸಿಗುವಂತಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದ ಸುಪ್ರೀಂ ಕೋರ್ಟ್‌, 12 ಅಂಕಿಗಳುಳ್ಳ ಈ ವಿಶಿಷ್ಟ ಸಂಖ್ಯೆಯನ್ನು ಬ್ಯಾಂಕ್‌ ಖಾತೆಗಳಿಗೆ ಮತ್ತು ಮೊಬೈಲ್‌ ನಂಬರ್‌ಗೆ ಜೋಡಿಸುವುದಕ್ಕೆ ನಿರ್ಬಂಧ ವಿಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು