ಮಂಗಳವಾರ, ಜನವರಿ 28, 2020
20 °C

ಶಬರಿಮಲೆ: ವಿಚಾರಣೆ ಇಂದಿನಿಂದ

ಪಿಟಿಐ Updated:

ಅಕ್ಷರ ಗಾತ್ರ : | |

Sabarimala

ನವದೆಹಲಿ : ಎಲ್ಲ ವಯೋಮಾನದ ಮಹಿಳೆಯರಿಗೂ ಶಬರಿಮಲೆ ದೇವಸ್ಥಾನದ ಒಳಗೆ ಪ್ರವೇಶ ನೀಡುವಂತೆ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಜ.13ರಿಂದ (ಸೋಮವಾರ) ಆರಂಭಿಸಲಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ಪೀಠದಲ್ಲಿ 9 ಜನ ನ್ಯಾಯಾಧೀಶರಿದ್ದಾರೆ. ಶಬರಿಮಲೆ ದೇವಸ್ಥಾನ ವಿಷಯವಾಗಿ 2018ರಲ್ಲಿ ಸುಪ್ರೀಂಕೋರ್ಟ್‌ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಹಲವರು ಅರ್ಜಿ ಸಲ್ಲಿಸಿದ್ದಾರೆ.

ಮುಸ್ಲಿಂ ಹಾಗೂ ಪಾರ್ಸಿ ಸಮುದಾಯದಲ್ಲಿ ಸಹ ಕೆಲವು ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ ಮಹಿಳೆಯರಿಗೆ ಪ್ರವೇಶ ಇಲ್ಲ. ಈ ವಿಷಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸಹ ಪೀಠ ಕೈಗೆತ್ತಿಕೊಳ್ಳಲಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು