ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಹೀನ್‌ ಬಾಗ್‌ ಪ್ರತಿಭಟನೆ: ದೆಹಲಿ ಚುನಾವಣೆ ಬಳಿಕ ವಿಚಾರಣೆ: ಸುಪ್ರೀಂ ಕೋರ್ಟ್‌

Last Updated 7 ಫೆಬ್ರುವರಿ 2020, 16:59 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಾಹೀನ್‌ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ.

ಈ ಕುರಿತು ವಿಚಾರಣೆ ನಡೆಸುವ ಮೂಲಕ ಶನಿವಾರ ನಡೆಯಲಿರುವ ದೆಹಲಿ ಚುನಾವಣೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ ಎಂದೂ ತಿಳಿಸಿದೆ.

‘ಶಾಹೀನ್‌ ಬಾಗ್‌ನಲ್ಲಿ ಸಮಸ್ಯೆ ಇದೆ ಎಂಬುದನ್ನು ನಾವು ಅರ್ಥೈಸಿಕೊಂಡಿದ್ದೇವೆ. ಅದನ್ನು ಹೇಗೆ ಪರಿಹರಿಸಬೇಕು ಎಂಬುದರ ಬಗ್ಗೆ ಚಿಂತಿಸಬೇಕಾಗಿದೆ’ ಎಂದೂ ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಕೆ.ಎಂ. ಜೋಸೆಫ್‌ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT