ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಫೇಲ್ ಡೀಲ್: ‘ಸುಪ್ರೀಂ’ನಿಂದ ನಾಳೆ ಮರುಪರಿಶೀಲನಾ ಅರ್ಜಿಯ ತೀರ್ಪು

Last Updated 13 ನವೆಂಬರ್ 2019, 10:56 IST
ಅಕ್ಷರ ಗಾತ್ರ

ನವದೆಹಲಿ:ರಫೇಲ್ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಕ್ಲೀನ್‌ಚಿಟ್ ನೀಡಿರುವ ಬಗ್ಗೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಕಟಿಸಲಿದೆ.

ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಮೇ 10ರಂದು ಪೂರ್ಣಗೊಳಿಸಿದ್ದ ಸರ್ವೋಚ್ಚ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಸರ್ಕಾರಕ್ಕೆ ಕ್ಲೀನ್‌ಚಿಟ್ ನೀಡಿರುವುದನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್, ಕೆ.ಎಂ.ಜೋಸೆಫ್ ಅವರಿದ್ದ ನ್ಯಾಯಪೀಠವು ತೀರ್ಪು ನೀಡಲಿದೆ.

ರಫೇಲ್ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದ್ದು, ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ 2018ರ ಡಿಸೆಂಬರ್ 14ರಂದು ವಜಾಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT