ಶನಿವಾರ, ಜುಲೈ 24, 2021
26 °C

ಲಾಕ್‌ಡೌನ್ ಅವಧಿಯಲ್ಲಿ ಪೂರ್ತಿ ವೇತನ: ಇಂದು ಸುಪ್ರೀಂ ಕೋರ್ಟ್ ತೀರ್ಪು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Supreme court

ನವದೆಹಲಿ: 54 ದಿನಗಳ ಲಾಕ್‌ಡೌನ್ ಅವಧಿಯಲ್ಲಿ ಪೂರ್ತಿ ವೇತನ ನೀಡುವ ವಿಚಾರಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಲಿದೆ.

ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗಿಗಳಿಗೆ ಪೂರ್ಣ ಪ್ರಮಾಣದ ವೇತನ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಕಂಪನಿಗಳೂ ಸೇರಿದಂತೆ ಅನೇಕ ಮಂದಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಲಾಕ್‌ಡೌನ್ ಸಂದರ್ಭದ ವೇತನ ನೀಡಿಕೆ ವಿಚಾರಕ್ಕೆ ಸಂಬಂಧಿಸಿ ಏನು ಮಾಡಬಹುದು ಎಂಬ ಬಗ್ಗೆ ಉದ್ಯೋಗಿಗಳು ಮತ್ತು ಉದ್ಯೋಗದಾತರ ನಡುವೆ ಮಾತುಕತೆ ನಡೆಯಬೇಕಿದೆ ಎಂದು ಈ ಹಿಂದಿನ ವಿಚಾರಣೆ ವೇಳೆ, ಜೂನ್ 4ರಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ನ್ಯಾಯಮೂರ್ತಿ ಅಶೋಕ್ ಭೂಷಣ್, ಸಂಜಯ್ ಕಿಶನ್ ಕೌಲ್ ಮತ್ತು ಎಂ.ಆರ್.ಶಾ ಅವರಿರುವ ನ್ಯಾಯಪೀಠವು ಅರ್ಜಿಗಳ ವಿಚಾರಣೆ ನಡೆಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು