ಸೋಮವಾರ, ಫೆಬ್ರವರಿ 17, 2020
30 °C

ಅಯೋಧ್ಯೆ ವಿವಾದ: ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಪುನರ್‌ ರಚಿಸಿದ ಸುಪ್ರೀಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಅಯೋಧ್ಯೆಯ ರಾಮಜನ್ಮ ಭೂಮಿ–ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆ ನಡೆಸಲು ಐವರು ನ್ಯಾಯಮೂರ್ತಿಗಳಿರುವ ಹೊಸದೊಂದು ಸಾಂವಿಧಾನಿಕ ಪೀಠವನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಪುನರ್‌ ರಚಿಸಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ನೂತನ ಪೀಠದಲ್ಲಿ ನ್ಯಾಯಮೂರ್ತಿಗಳಾದ ಎಸ್‌.ಎ.ಬಾಬ್ಡೆ, ಡಿ.ವೈ ಚಂದ್ರಾಚೂಡ್‌, ಅಶೋಕ್‌ ಭೂಷಣ್‌, ಎಸ್‌.ಎ. ನಾಜೀರ್‌ ಇದ್ದಾರೆ.

ಇದನ್ನೂ ಓದಿ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಉದಯ್‌ ಲಲಿತ್‌, ಜ. 29ಕ್ಕೆ ವಿಚಾರಣೆ

ನ್ಯಾಯಮೂರ್ತಿ ಯು.ಯು.ಲಲಿತ್‌ ಅವರು ವಿಚಾರಣಾ ಪೀಠದಿಂದ ಹಿಂದೆ ಸರಿದ ಬಳಿಕ ಹೊಸ ಪೀಠವನ್ನು ರಚಿಸಲಾಗಿದೆ. ಜನವರಿ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎನ್‌.ವಿ.ರಮಣ ಅವರೂ ಹೊಸ ಪೀಠದಲ್ಲಿಲ್ಲ.

ಈ ಸಂಬಂಧ ರಾಜಕೀಯ ಪಕ್ಷಗಳಿಗೆ ನೋಟಿಸ್‌ ನೀಡಿರುವ ಸುಪ್ರಿಂ ಕೋರ್ಟ್‌ ರಿಜಿಸ್ಟ್ರಾರ್‌, ‘ವಿವಾದಿತ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು ಸಾಂವಿಧಾನಿಕ ಪೀಠದೆದುರು ಎತ್ತಿಕೊಳ್ಳುವ ಮುನ್ನ, ಜ.29 ರಂದು(ಗುರುವಾರ) ಮುಖ್ಯ ನ್ಯಾಯಮೂರ್ತಿಗಳ ಅಂಗಳಲ್ಲಿ ವಿಚಾರಣೆಗೊಳಪಡಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಇನ್ನಷ್ಟು...

ಅಯೋಧ್ಯೆ ತೀರ್ಪು, ಇಸ್ಲಾಂಗೆ ಮಸೀದಿ ಹಂಗಿಲ್ಲ: 1994ರ ತೀರ್ಪು ಎತ್ತಿಹಿಡಿದ ‘ಸುಪ್ರೀಂ’

ಅಯೋಧ್ಯೆ ಪ್ರಕರಣ ಭೂ ವಿವಾದ ಮಾತ್ರ

* ಅಯೋಧ್ಯೆ: ಕಾನೂನು ರೂಪಿಸಲು ವಿಎಚ್‌ಪಿ ಆಗ್ರಹ

ರಾಮ ಮಂದಿರ ನಿರ್ಮಾಣಕ್ಕೆ ಆತುರ ಸಲ್ಲದು: ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌​

ರಾಮ ಮಂದಿರ ನಿರ್ಮಿಸದಿದ್ದರೆ ಹಿಂದೂ ಧರ್ಮಕ್ಕೆ ಹಿನ್ನಡೆ: ವಿಶ್ವೇಶತೀರ್ಥ ಸ್ವಾಮೀಜಿ​

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು