‘ಯಥಾಸ್ಥಿತಿ ಮುಂದುವರಿಸಿ’ ಸುಪ್ರೀಂಕೋರ್ಟ್ ಆದೇಶ

ಶುಕ್ರವಾರ, ಜೂಲೈ 19, 2019
24 °C

‘ಯಥಾಸ್ಥಿತಿ ಮುಂದುವರಿಸಿ’ ಸುಪ್ರೀಂಕೋರ್ಟ್ ಆದೇಶ

Published:
Updated:

ನವ ದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ಶುಕ್ರವಾರ ಕರ್ನಾಟಕ ಶಾಸಕರು ಸಲ್ಲಿಸಿದ್ದ ಪ್ರಕರಣದ ವಿಚಾರಣೆ ನಡೆಯಿತು. ಯಥಾಸ್ಥಿತಿ ಕಾಪಾಡಲು ಸೂಚಿಸಿ, ಪ್ರಕರಣದ ವಿಚಾರಣೆಯನ್ನು ಮಂಗಳವಾರಕ್ಕೆ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠ ಮುಂದೂಡಿತು.

‘ಈ ಪ್ರಕರಣದಲ್ಲಿ ಸಂವಿಧಾನಾತ್ಮಕ ಅಂಶಗಳು ಅಡಕವಾಗಿದ್ದು, ಹೆಚ್ಚಿನ ವಿಚಾರಣೆ ಅಗತ್ಯ’ ಎಂದು ಪೀಠವು ಅಭಿಪ್ರಾಯಪಟ್ಟಿತು. ಶಾಸಕರ ಪರ ಮುಕುಲ್ ರೋಹಟ್ಗಿ, ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ, ಮುಖ್ಯಮಂತ್ರಿ ಪರ ವಕೀಲ ರಾಜೀವ್ ಧವನ್ ವಾದ ಮಂಡಿಸಿದರು.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ಮಾಡಬೇಡಿ. ಯಥಾಸ್ಥಿತಿ ಕಾಪಾಡಿ ಎಂದು ಸೂಚಿಸಿ, ಮಂಗಳವಾರಕ್ಕೆ ವಿಚಾರಣೆ ಮುಂದೂಡಿತು.

ಬರಹ ಇಷ್ಟವಾಯಿತೆ?

 • 45

  Happy
 • 3

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !