ಗುರುವಾರ , ಆಗಸ್ಟ್ 22, 2019
26 °C

ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ

Published:
Updated:

ನವದೆಹಲಿ: ಬಿಜೆಪಿ ಹಿರಿಯ ನಾಯಕಿ, ವಿದೇಶಾಂಗ ಇಲಾಖೆಯ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಅಂತ್ಯಕ್ರಿಯೆ ದೆಹಲಿಯ ಲೋಧಿ ಚಿತಾಗಾರದಲ್ಲಿ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸುಷ್ಮಾ ಅವರ ಪುತ್ರಿ ಬಾಂಸುರಿ ಸ್ವರಾಜ್ ಅವರು ಅಂತಿಮ ವಿಧಿವಿಧಾನ ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮಂಗಳವಾರ್ ರಾತ್ರಿ ದಿಢೀರ್‌ ಹೃದಯಸ್ತಂಭನಕ್ಕೊಳಗಾಗಿದ್ದ ಸುಷ್ಮಾ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದರು. ಬಳಿಕ ಪಾರ್ಥಿವ ಶರೀರವನ್ನು ಸುಷ್ಮಾ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿತ್ತು. ಗಣ್ಯರು ಅಂತಿಮ ದರ್ಶನ ಪಡೆದ ಬಳಿಕ ಮೃತದೇಹವನ್ನು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಗೆ ತರಲಾಗಿತ್ತು. ಅಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ಮಧ್ಯಾಹ್ನ 3 ಗಂಟೆಯ ಬಳಿಕ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಲೋಧಿ ಚಿತಾಗಾರಕ್ಕೆ ಕೊಂಡೊಯ್ಯಲಾಯಿತು. ಈ ವೇಳೆ ಮೋದಿ, ವೆಂಕಯ್ಯ ನಾಯ್ಡು, ಅಡ್ವಾಣಿ ಸೇರಿದಂತೆ ಕೆಲವು ಹಿರಿಯ ನಾಯಕರು ಮತ್ತೊಮ್ಮೆ ಅಂತಿಮ ದರ್ಶನ ಪಡೆದರು. ಬಳಿಕ ಅಂತ್ಯಕ್ರಿಯೆ ನೆರವೇರಿತು.

ಇನ್ನಷ್ಟು...

ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಇನ್ನಿಲ್ಲ

ಈ ದಿನಕ್ಕಾಗಿ ಜೀವಮಾನವಿಡೀ ಕಾದಿದ್ದೆ: ವೈರಲ್ ಆಗುತ್ತಿದೆ ಸುಷ್ಮಾ ಟ್ವೀಟ್‌

ತಮಾಷೆಯ ಟ್ವೀಟ್‌ಗಳಿಂದ ಉತ್ತರಿಸುತ್ತಾ, ಟ್ವಿಟರ್‌ನ್ನೇ ಸಹಾಯವಾಣಿ ಮಾಡಿದ್ದ ಸುಷ್ಮಾ

₹1 ಶುಲ್ಕ ಪಡೆಯಲು ನಾಳೆ ಬನ್ನಿ ಎಂದಿದ್ದರು ಸುಷ್ಮಾ: ಹರೀಶ್ ಸಾಳ್ವೆ

Post Comments (+)