ಶುಕ್ರವಾರ, ಡಿಸೆಂಬರ್ 6, 2019
19 °C

ಕಾಲಾಪಾನಿಯಿಂದ ಸೇನೆ ವಾಪಸ್‌ ಪಡೆಯಿರಿ: ಭಾರತಕ್ಕೆ ನೇಪಾಳ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ಕಾಲಾಪಾನಿ ಪ್ರದೇಶದಿಂದ ಸೇನೆಯನ್ನು ವಾಪಸ್‌ ಕರೆಸಿಕೊಳ್ಳಬೇಕು ಎಂದು ಭಾರತಕ್ಕೆ ಮನವಿ ಮಾಡಿರುವ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ, ತನ್ನ ಪರಿಧಿಯ ಒಂದಿಂಚು ಭೂಮಿಯ ಅತಿಕ್ರಮಣಕ್ಕೂ
ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ’ ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್‌ ಕೇಂದ್ರಾಡಳಿತ ಪ್ರದೇಶಗಳ ರಚನೆ ನಂತರ ಭಾರತ ಹೊಸದಾಗಿ ನಕ್ಷೆಯನ್ನು ಬಿಡುಗಡೆ ಮಾಡಿತ್ತು. ಆ ನಕ್ಷೆಯಲ್ಲಿ ಕಾಲಾಪಾನಿ ಪ್ರದೇಶವನ್ನು ಭಾರತದ ನೂತನ ನಕ್ಷೆಯಲ್ಲಿ ಸೇರಿಸಲಾಗಿದೆ ಎಂದು ಗಮನಸೆಳೆದಾಗ ಈ ಪ್ರತಿಕ್ರಿಯೆ ನೀಡಿದರು.

ಭಾರತವು ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರ ಕ್ರಮವಹಿಸಲಿದೆ ಎಂದು ಹೇಳಿದರು. ರಾಜತಾಂತ್ರಿಕ ಕ್ರಮಗಳ ಮೂಲಕ ವಿವಾದ ಬಗೆಹರಿಸಲು ಸರ್ಕಾರ ಒತ್ತು ನೀಡಲಿದೆ ಎಂದೂ ಒಲಿ ಹೇಳಿದರು.

ಪ್ರತಿಕ್ರಿಯಿಸಿ (+)