ಪರಿಶಿಷ್ಟ ಪಂಗಡಕ್ಕೆ ತಳವಾರ, ಪರಿವಾರ

7

ಪರಿಶಿಷ್ಟ ಪಂಗಡಕ್ಕೆ ತಳವಾರ, ಪರಿವಾರ

Published:
Updated:

ನವದೆಹಲಿ: ಕರ್ನಾಟಕದ ತಳವಾರ ಮತ್ತು ಪರಿವಾರ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌.ಟಿ) ಸೇರಿಸಲು ಕೇಂದ್ರ ಸಂಪುಟ ಸೋಮವಾರ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಮಸೂದೆಯನ್ನು ಕೇಂದ್ರ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಿದೆ.

ಇದರೊಂದಿಗೆ ಪರಿವಾರ ಮತ್ತು ತಳವಾರ ಸಮುದಾಯದ ವರ್ಷಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ಮಸೂದೆಗೆ ಸಂಸತ್‌ ಅಂಗೀಕಾರ ದೊರೆತ ನಂತರ ಎರಡೂ ಸಮುದಾಯಗಳ ಸದಸ್ಯರು ರಾಜ್ಯ ಸರ್ಕಾರದಿಂದ ಎಸ್‌.ಟಿ. ಜಾತಿ ಪ್ರಮಾಣ ಪತ್ರ ಪಡೆಯಲು ಅರ್ಹರಾಗುತ್ತಾರೆ.

ಈ ಎರಡು ಸಮುದಾಯಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !