ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಮುಂದಿನ 3 ದಿನ ಭಾರೀ ಮಳೆ ಮುನ್ಸೂಚನೆ

7

ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಮುಂದಿನ 3 ದಿನ ಭಾರೀ ಮಳೆ ಮುನ್ಸೂಚನೆ

Published:
Updated:

ಚೆನ್ನೈ: ಶುಕ್ರವಾರದ ಹೊತ್ತಿಗೆ ಸೃಷ್ಟಿಯಾಗಲಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದ್ದು, ಮುಂದಿನ ಮೂರು ದಿನಗಳು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಶುಕ್ರವಾರ(ಅಕ್ಟೋಬರ್‌ 5) ಆಗ್ನೇಯ ದಿಕ್ಕಿನ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ಮುಂದಿನ 36 ಗಂಟೆಗಳಲ್ಲಿ ಚಂಡಮಾರುವಾಗಿ ಪರಿವರ್ತನೆಯಾಗುವ ಸಾಧ್ಯತೆ ಹೆಚ್ಚಿದೆ. ವಾಯುವ್ಯ ದಿಕ್ಕಿನ ಕಡೆಗೆ ಚಂಡಮಾರುತ ಮುಖ ಮಾಡಿ ಓಮನ್‌ ಕಡೆಗೆ ಸಾಗಲಿದೆ ಎಂದು ಚೆನ್ನೈ ಹವಾಮಾನ ಇಲಾಖೆ ಉಪ ಮಹಾನಿರ್ದೇಶಕ ಎಸ್‌.ಬಾಲಚಂದ್ರನ್‌ ತಿಳಿಸಿದರು. 

ದಕ್ಷಿಣ ಕೇರಳದ ಕರಾವಳಿ, ಲಕ್ಷದ್ವೀಪ ಪ್ರದೇಶ, ಅರಬ್ಬಿ ಸಮುದ್ರದ ಆಗ್ನೇಯ ಭಾಗ ಮತ್ತು ಮಧ್ಯ ಭಾಗದಲ್ಲಿ ಶುಕ್ರವಾರದಿಂದ ಸೋಮವಾರದ ವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 

ಶ್ರೀಲಂಕಾ, ತಮಿಳುನಾಡು, ಪುದುಚೇರಿ ಹಾಗೂ ಕೇರಳದ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್‌ 6ರಿಂದ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ಗಾಳಿಯ ವೇಗ 40– 50 ಕಿ.ಮೀ.ನಿಂದ ಗಂಟೆಗೆ 60 ಕಿ.ಮೀ. ವೇಗ ತಲುಪಲಿದೆ. ಕರಾವಳಿ ತೀರದವರೆಗೆ ಭಾರಿ ಎತ್ತರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. 

ಶುಕ್ರವಾರ, ಶನಿವಾರ ಹಾಗೂ ಭಾನುವಾರ ಕರ್ನಾಟಕದಲ್ಲೂ ಮಳೆಯ ಮುನ್ಸೂಚನೆ ದೊರೆತಿದೆ.  

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !