ಶುಕ್ರವಾರ, ಡಿಸೆಂಬರ್ 6, 2019
18 °C

ಸ್ನೇಹಿತನೊಂದಿಗೆ ಬರ್ತ್‌ಡೇ ಪಾರ್ಟಿ: ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಯಮತ್ತೂರು: ತನ್ನದೇ ಹುಟ್ಟುಹಬ್ಬ ಆಚರಣೆಗೆಂದು ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ತೆರಳಿದ ಯುವತಿ ಮೇಲೆ ಆರು ಜನ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

11ನೇ ತರಗತಿಯ ವಿದ್ಯಾರ್ಥಿನಿ ಮಂಗಳವಾರ ತನ್ನ ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ಹೋಗಿದ್ದಳು. ರಾತ್ರಿ 9 ಗಂಟೆ ಸುಮಾರಿಗೆ ಮನೆಗೆ ಹಿಂದಿರುಗುವ ವೇಳೆ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಘಟನೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯು ನಡೆದ ವಿಚಾರವನ್ನು ಮರುದಿನ ತನ್ನ ತಾಯಿಯ ಬಳಿ ತಿಳಿಸಿದ್ದಾಳೆ. ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು