ಮಂಗಳವಾರ, ಸೆಪ್ಟೆಂಬರ್ 17, 2019
27 °C

ತೆಲಂಗಾಣದ ರಾಜ್ಯಪಾಲರಾಗಿ ತಮಿಳಿಸೈ ಸೌಂದರರಾಜನ್ ಪ್ರಮಾಣವಚನ ಸ್ವೀಕಾರ

Published:
Updated:

ಹೈದರಾಬಾದ್: ತೆಲಂಗಾಣದ ನೂತನ ರಾಜ್ಯಪಾಲೆಯಾಗಿ ಡಾ. ತಮಿಳಿಸೈ ಸೌಂದರರಾಜನ್ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.

ಸೌಂದರರಾಜನ್ ಅವರಿಗೆ ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾಣ್ ಪ್ರತಿಜ್ಞಾವಿಧಿ ಬೋಧಿಸಿದರು.

ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷೆಯಾಗಿದ್ದ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಸೆಪ್ಟೆಂಬರ್ 1ರಂದು ತೆಲಂಗಾಣದ ರಾಜ್ಯಪಾಲೆಯನ್ನಾಗಿ ಘೋಷಿಸಿದ್ದರು. ಜತೆಗೆ ಹಿಮಾಚಲ ಪ್ರದೇಶ, ಕೇರಳ, ಮಹಾರಾಷ್ಟ್ರ ಮತ್ತು ರಾಜಸ್ತಾನಕ್ಕೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದರು.

Post Comments (+)