ಭಾನುವಾರ, ಜನವರಿ 26, 2020
28 °C

ಕಾಶ್ಮೀರ: ಸಿಆರ್‌ಪಿಎಫ್‌ ಸಿಬ್ಬಂದಿ ಗುರಿಯಾಗಿಸಿ ಉಗ್ರರಿಂದ ಗ್ರೆನೇಡ್‌ ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು–ಕಾಶ್ಮೀರದ ಕೌದಾರ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿ ಗುರಿಯಾಗಿಸಿ ಶಂಕಿತ ಉಗ್ರರು ಶನಿವಾರ ಗ್ರೆನೇಡ್‌ ದಾಳಿ ನಡೆಸಿದ್ದಾರೆ. 16 ವರ್ಷದ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರೆನೇಡ್‌ ಗುರಿತಪ್ಪಿ ರಸ್ತೆ  ಬದಿ ಸ್ಫೋಟಗೊಂಡಿದ್ದರಿಂದ ಸಿಆರ್‌ಪಿಎಫ್‌ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಸ್ಫೋಟದಿಂದ ರಸ್ತೆಯಲ್ಲಿ ಸಾಗುತ್ತಿದ್ದ ಬಾಲಕನಿಗೆ ಸಣ್ಣಪುಟ್ಟ ಗಾಯಗಳಗಿವೆ. ಎರಡು ಖಾಸಗಿ ವಾಹನಗಳಿಗೂ ಹಾನಿಯಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ದಾಳಿ ನಡೆಸಿದ ಶಂಕಿತ ಉಗ್ರರನ್ನು ಸೆರೆಹಿಡಿಯಲು ತಕ್ಷಣವೇ ಕಾರ್ಯಾಚರಣೆ ಆರಂಭಿಸಲಾಗಿದೆ. ಯಾವುದೇ ಉಗ್ರ ಸಂಘಟನೆ ಈವರೆಗೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು