ಶುಕ್ರವಾರ, ಸೆಪ್ಟೆಂಬರ್ 17, 2021
24 °C
ತೆಲಂಗಾಣ

ಸರ್ಕಾರದ ವಿರುದ್ಧ ಪ್ರತಿಭಟನೆ ವೇಳೆ ಕುರ್ಚಿಗಾಗಿ ಕಿತ್ತಾಡಿದ ಕಾಂಗ್ರೆಸ್‌ ನಾಯಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲಂಗಾಣ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಈಚೆಗೆ ಇಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕರಿಬ್ಬರು ಕುರ್ಚಿಗಾಗಿ ಕಿತ್ತಾಟ ನಡೆಸಿರುವ ದೃಶ್ಯವಿರುವ ವಿಡಿಯೊ ವೈರಲ್‌ ಆಗಿದೆ.

ಕಾಂಗ್ರೆಸ್‌ನ ಹಿರಿಯ ಮುಖಂಡ ವಿ. ಹನುಮಂತರಾವ್‌ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ (ಟಿಪಿಸಿಸಿ) ವಕ್ತಾರ ಎಂ.ನಾಗೇಶ್‌ ಅವರು ಕುರ್ಚಿಗಾಗಿ ವೇದಿಕೆಯಲ್ಲೇ ಪರಸ್ಪರ ತಳ್ಳಾಟ ನಡೆಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. ತಳ್ಳಾಟದಲ್ಲಿ ಮೊದಲು ಕೆಳಗೆ ಬಿದ್ದ ನಾಗೇಶ್‌ ನಂತರ ಎದ್ದು ರಾವ್‌ ಅವರನ್ನೂ ತಳ್ಳಿ ಕೆಳಗೆ ಬೀಳಿಸಿದ್ದಾರೆ.

 ತೆಲಂಗಾಣ ಮಾಧ್ಯಮಿಕ ಶಿಕ್ಷಣ ಮಂಡಳಿ ನಡೆಸಿದ ಪಿ.ಯು ಪರೀಕ್ಷೆಯ ಫಲಿತಾಂಶ ಗೊಂದಲದಿಂದ 22 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿರುವ ವಿರೋಧ ಪಕ್ಷಗಳು, ಸರ್ಕಾರದ  ಶಿಕ್ಷಣ ನೀತಿಯ ವಿರುದ್ಧ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದವು. ಮುಖಂಡರನ್ನು ಸ್ವಾಗತಿಸಲು ಹನುಮಂತರಾವ್‌ ಮೈಕ್‌ ಹಿಡಿದುಕೊಂಡಿದ್ದಾಗ ಅವರ ಕುರ್ಚಿಯನ್ನು ನಾಗೇಶ್‌  ಎಳೆದುಕೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು