ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲಿ ವಿವರಣೆ ನೀಡಿದ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ

Last Updated 6 ಡಿಸೆಂಬರ್ 2019, 16:23 IST
ಅಕ್ಷರ ಗಾತ್ರ

ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಪೊಲೀಸರು ಆರೋಪಿಗಳಿಂದ ಮಾಹಿತಿ ಪಡೆಯುತ್ತಿದ್ದರು. ಇದೇ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡು ಹಾರಿಸಬೇಕಾಯಿತುಎಂದು ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನರ ತಿಳಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಅವರು ಕನ್ನಡದಲ್ಲಿಯೂ ವಿವರಣೆ ನೀಡಿದರು.

(22:33ರಿಂದ 26:00 ನಿಮಿಷದವರೆಗೆ ಕನ್ನಡದಲ್ಲಿ ಮಾತನಾಡಿದ್ದಾರೆ)

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳು ಆಂಧ್ರ ಪ್ರದೇಶ, ಕರ್ನಾಟಕ, ತೆಲಂಗಾಣ ರಾಜ್ಯಗಳಲ್ಲಿಯೂ ಅಪರಾಧ ಕೃತ್ಯಗಳನ್ನು ನಡೆಸಿರುವ ಸಾಧ್ಯತೆಗಳಿವೆ.ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇವೆ ಎಂದು ಹೇಳಿದರು.

ನವೆಂಬರ್ 27ರಂದು ಪಶುವೈದ್ಯೆಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದರು.

ಪ್ರಕರಣ ಸಂಬಂಧ ಸಾಕ್ಷ್ಯಾಧಾರಗಳನ್ನುಕಲೆ ಹಾಕಿ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ನ್ಯಾಯಾಲಯ ಆರೋಪಿಗಳನ್ನು 10 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿತ್ತು.

ಬಳಿಕ ಆರೋಪಿಗಳನ್ನು ಚರ್ಲಪಲ್ಲಿ ಜೈಲಿನಲ್ಲಿ ಇಡಲಾಗಿತ್ತು. ಘಟನಾ ಸ್ಥಳದಲ್ಲಿ ಮಹಜರು ಮಾಡಲು ಆರೋಪಿಗಳಾದ ಮೊಹಮ್ಮದ್ ಆರಿಫ್, ಜೊಲ್ಲು ಶಿವಾ, ಜೊಲ್ಲು ನವೀನ್ ಕುಮಾರ್ ಮತ್ತು ಚಿನಟಕುಂಟ ಚೆನ್ನ ಕೇಶವುಲು ಅವರನ್ನು ಪೊಲೀಸರ ತಂಡಕರೆದುಕೊಂಡು ಹೋಗಲಾಗಿತ್ತು.

ವಿಚಾರಣೆ ವೇಳೆ ಆರೋಪಿಗಳು ಪೊಲೀಸರ ಮೇಲೆ ದೊಣ್ಣೆಗಳಿಂದ ಹೊಡೆದು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದರು. ಆಗ 10 ಮಂದಿ ಪೊಲೀಸರ ತಂಡ ಆರೋಪಿಗಳ ಮೇಲೆ ಗುಂಡು ಹಾರಿಸಿತು ಎಂದು ಅವರು ಮಾಹಿತಿ ನೀಡಿದರು. ಮುಂಜಾನೆ 5.30ರಿಂದ 6.15ರ ಅವಧಿಯಲ್ಲಿ ಎನ್‌ಕೌಂಟರ್ ನಡೆದಿದೆ.

ಆರೋಪಿಗಳು ಸಂತ್ರಸ್ತೆಯ ಮೊಬೈಲ್‌ ಸೇರಿದಂತೆ ಇತರ ವಸ್ತುಗಳನ್ನು ಅಡಗಿಸಿಟ್ಟಿದ್ದರು. ಅವುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣ ಸಂಬಂಧ ಎಲ್ಲಾ ಆಯಾಮಗಳಿಂದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT