ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಾಣೆ: ಇಂದಿನಿಂದ 10 ದಿನ ಸಂಪೂರ್ಣ ಲಾಕ್‌ಡೌನ್‌

Last Updated 2 ಜುಲೈ 2020, 7:16 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ನಗರಕ್ಕೆ ಹೊಂದಿಕೊಂಡಿರುವ ಥಾಣೆ, ಕಲ್ಯಾಣ್‌ ದೊಂಬಿವಿಲಿ, ಮೀರಾ ಭಯಂದರ್ ನಗರ ಪ್ರದೇಶ ವ್ಯಾಪ್ತಿಯಲ್ಲಿ ಗುರುವಾರದಿಂದ 10 ದಿನಗಳವರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿ, ಈ ಮೂರು ನಗರಗಳಲ್ಲಿನ ನಗರಾಡಳಿತ ಸಂಸ್ಥೆಗಳು 10 ದಿನಗಳವರೆಗೆ ಲಾಕ್‌ಡೌನ್‌ ಜಾರಿಗೆ ಜಂಟಿಯಾಗಿ ನಿರ್ಧರಿಸಿ, ಕ್ರಮ ತೆಗೆದುಕೊಂಡಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗತ್ಯ ಸೇವೆಗಳು ಮತ್ತು ವೈದ್ಯಕೀಯ ತುರ್ತು ಸೇವೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ. ನಗರದ ವ್ಯಾಪ್ತಿಯಲ್ಲಿ ಬಸ್‌, ಆಟೊ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

ಲಾಕ್‌ಡೌನ್‌ ಗುರುವಾರ ಬೆಳಿಗ್ಗೆ 7 ಗಂಟೆಯಿಂದ ಜಾರಿಯಾಗಿದ್ದು, ಜುಲೈ 12ರ ಬೆಳಿಗ್ಗೆ 7 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನವಿ ಮುಂಬೈ ಮತ್ತು ಪನ್ವೆಲ್ ನಗರಾಡಳಿತ ಸಂಸ್ಥೆಗಳು ಜುಲೈ 3ರ ಮಧ್ಯರಾತ್ರಿಯಿಂದ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲಿವೆ ಎಂದು ತಿಳಿದು ಬಂದಿದೆ.

ಥಾಣೆ ಜಿಲ್ಲಾ ವ್ಯಾಪ್ತಿಯಲ್ಲಿ ಬುಧವಾರ 1,322 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 34,646 ಜನರಲ್ಲಿ ಸೋಂಕು ಕಂಡು ಬಂದಿದ್ದು, 1,094 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT