ಸಾಧುಗಳ ಹತ್ಯೆ ಆತಂಕ ಸೃಷ್ಟಿ

7

ಸಾಧುಗಳ ಹತ್ಯೆ ಆತಂಕ ಸೃಷ್ಟಿ

Published:
Updated:

ಲಖನೌ: ಉತ್ತರ ಪ್ರದೇಶದ  ಔರೆಯಾ ಜಿಲ್ಲೆಯಲ್ಲಿ ಇಬ್ಬರು ಸಾಧುಗಳನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ. ಬಿಧುನಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ನಡೆದ ಘಟನೆಯಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿತ್ತು.

‘ಕುದರ್‌ಕೋಟ್‌ ಪ್ರದೇಶದ ಭಯನಾಕ್‌ ನಾಥ್ ಮಂದಿರದ ಸಮೀಪ ಮುಂಜಾನೆ 3ರ ಸುಮಾರಿಗೆ ಹತ್ಯೆ ನಡೆದಿದೆ. ಮೂವರು ಸಾಧುಗಳ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ’ ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ರಾಜೇಶ್ ಕುಮಾರ್‌ ತಿಳಿಸಿದ್ದಾರೆ.

ಗೋಹತ್ಯೆ ಮಾಡುತ್ತಿದ್ದವರನ್ನು ಸಾಧುಗಳು ವಿರೋಧಿಸಿದ್ದರಿಂದ ಅವರ ಮೇಲೆ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿತ್ತು.

 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !