ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ: ಶಾಮಿಯಾನ ಕುಸಿದು 14 ಮಂದಿ ಸಾವು

Last Updated 23 ಜೂನ್ 2019, 14:14 IST
ಅಕ್ಷರ ಗಾತ್ರ

ಬರ್ಮೇರ್‌ : ರಾಜಸ್ಥಾನದ ಬರ್ಮೇರ್‌ನಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ಬಲವಾದ ಗಾಳಿ ಬೀಸಿದ ಪರಿಣಾಮ ಶಾಮಿಯಾನ ಬಿದ್ದು, 14 ಮಂದಿ ಮೃತಪಟ್ಟಿದ್ದಾರೆ. 50 ಮಂದಿಗೆ ಗಾಯಗಳಾಗಿದ್ದು ಕೆಲವರ ಪರಿಸ್ಥಿತಿ ಗಂಭೀರವಾಗಿದೆ.

ಜೈಪುರದಿಂದ 500 ಕಿಮೀ ದೂರದಲ್ಲಿರುವ ಶಾಲೆಯೊಂದರ ಮೈದಾನದಲ್ಲಿ ಈ ಘಟನೆ ನಡೆದಿದೆ.ರಾಮಕಥಾ ನಡೆಯುವ ವೇಳೆ ಜೋರಾಗಿ ಗಾಳಿ ಬೀಸುತ್ತಿದ್ದಂತೆ ಜನರು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸೇರುವಂತೆ ವ್ಯಕ್ತಿಯೊಬ್ಬರು ಸೂಚಿಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಜಿಲ್ಲಾಡಳಿತದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯ ಆಡಳಿತಾಧಿಕಾರಿಗಳು ತನಿಖೆ ನಡೆಸಬೇಕೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT