ಭಾನುವಾರ, ಆಗಸ್ಟ್ 1, 2021
28 °C

ಭಯೋತ್ಪಾದನಾ ಕೃತ್ಯಕ್ಕೆ ಯೋಜಿಸಿದ್ದ ಮಹಿಳೆಗೆ ಕೋವಿಡ್‌–19 ದೃಢ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸಿಎಎ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ದೇಶದಲ್ಲಿ ಭಯೋತ್ಪಾದನಾ ದಾಳಿ ನಡೆಸಲು ಯೋಜಿಸಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ಕಾಶ್ಮೀರದ ಮಹಿಳೆಯೊಬ್ಬರಿಗೆ ಕೋವಿಡ್‌–19 ಇರುವುದು ದೃಢಪಟ್ಟಿದ್ದು, ಆಕೆಗೆ ಚಿಕಿತ್ಸೆ ನೀಡಬೇಕೆಂದು ದೆಹಲಿ ಮೆಟ್ರೊಪಾಲಿಟನ್ ನ್ಯಾಯಾಲಯ ಆದೇಶಿಸಿದೆ. 

ಬಂಧಿತ ಮಹಿಳೆ ಹೀನಾ ಬಶೀರ್ ಬೇಗ್‌ಗೆ ಕೋವಿಡ್–19 ಇರುವುದು ಪರೀಕ್ಷೆಯ ಮೂಲಕ ದೃಢಪಟ್ಟಿತ್ತು. ಈ ಸಂಬಂಧ ವೈದ್ಯಕೀಯ ವರದಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ನ್ಯಾಯಾಲಯದ ಗಮನಕ್ಕೆ ತಂದಿತ್ತು. 

ಜುಲೈ 4ರವರೆಗೆ ಹೀನಾ ಬಶೀರ್ ಬೀಗ್, ಅವರ ಪತಿ ಜಹನಾಜ್‌ಜೈಬ್ ಮತ್ತು ಅಬ್ದುಲ್ ಬಸಿತ್ ಅವರನ್ನು ನ್ಯಾಯಾಂಗ ವಶಕ್ಕೆ ನೀಡಬೇಕೆಂದು ಕೋರಿ ಎನ್ಐಎ ದೆಹಲಿ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಅರ್ಜಿ ಸಲ್ಲಿಸಿತ್ತು. ಆರೋಪಿಗೆ ಮಹಿಳೆಗೆ ಕೋವಿಡ್‌–19 ದೃಢಪಟ್ಟಿರುವುದರಿಂದ ಆಕೆಗೆ ತಕ್ಷಣವೇ ಎಲ್‌ಎನ್‌ಜೆಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಬೇಕು. ಚಿಕಿತ್ಸೆ ಪೂರ್ಣಗೊಂಡ ಬಳಿಕ ಆಕೆಯನ್ನು ಜುಲೈ 4ರ ತನಕ ತಿಹಾರ್ ಜೈಲಿನಲ್ಲಿರಿಸಬೇಕು ಎಂದು ಕೋರ್ಟ್ ಆದೇಶಿಸಿದೆ. 

ಬಂಧಿತ ಮೂವರು ಆರೋಪಿಗಳೂ ಇಸ್ಲಾಮಿಕ್ ಸ್ಟೇಟ್ ಖೋರಾಸಾನ್ ಪ್ರಾಂತ್ಯ (ಐಎಸ್‌ಕೆಪಿ) ಜತೆ ನಂಟು ಹೊಂದಿದ್ದು, ಅವರನ್ನು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿತ್ತು. ಮಾರ್ಚ್ 23ರಂದು ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು