ಮಂಗಳವಾರ, ಫೆಬ್ರವರಿ 25, 2020
19 °C

ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಗ್ರೇನೇಡ್ ದಾಳಿ: ಒಂಬತ್ತು ಜನರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಶ್ರೀನಗರ: ಶ್ರೀನಗರದ ಲಾಲ್ ಚೌಕ್ ಪ್ರದೇಶದಲ್ಲಿ ಭಾನುವಾರ ಗಸ್ತಿನಲ್ಲಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಮೇಲೆ ಉಗ್ರರು ನಡೆಸಿದ ಗ್ರೇನೇಡ್ ದಾಳಿಯಲ್ಲಿ ಇಬ್ಬರು ಯೋಧರು ಹಾಗೂ ಏಳು ಮಂದಿ ನಾಗರಿಕರು ಗಾಯಗೊಂಡಿದ್ದಾರೆ.

ಪ್ರತಾಪ್‌ ಉದ್ಯಾನದ ಬಳಿ ನಿಯೋಜನೆಗೊಂಡಿದ್ದ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸಿಆರ್‌ಪಿಎಫ್ ವಕ್ತಾರ ಪಂಕಜ್ ಸಿಂಗ್ ಮಾತನಾಡಿ, ಚಾರ್ಲಿ 121 ಕಂಪನಿ ತಂಡದ ಇಬ್ಬರು ಯೋಧರು ಸೇರಿ ಇಬ್ಬರು ನಾಗರಿಕರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಭಾನುವಾರ ಮಾರುಕಟ್ಟೆ ಎಂದೇ ಪ್ರಸಿದ್ಧಿಯಾಗಿರುವ ಈ ಮಾರುಕಟ್ಟೆಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಂತಹ ಜನಸಂದಣಿ ಪ್ರದೇಶದ ಬಳಿಯೇ ಗ್ರೇನೇಡ್ ಸ್ಫೋಟ ಸಂಭವಿಸಿದ್ದರಿಂದಾಗಿ ಕೆಲಕಾಲ ಆತಂಕದ ವಾತಾವಾರಣ ನಿರ್ಮಾಣವಾಗಿತ್ತು.  ಘಟನೆ ನಡೆದ ಕೂಡಲೆ ಭದ್ರತಾ ಸಿಬ್ಬಂದಿ ಈ ಪ್ರದೇಶವನ್ನು ಸುತ್ತುವರಿದು ಗಸ್ತು ತಿರುಗುತ್ತಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು