ಶುಕ್ರವಾರ, ನವೆಂಬರ್ 15, 2019
22 °C

ಗುಂಡಿನ ಚಕಮಕಿ: ಕಾಶ್ಮೀರದಲ್ಲಿ ಉಗ್ರನ ಹತ್ಯೆ

Published:
Updated:

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಲಾವ್ದರಾ ಗ್ರಾಮದಲ್ಲಿ ಭಾನುವಾರ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹತ್ಯೆ ಮಾಡಿವೆ.

ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಶೋಧ ಕಾರ್ಯಾಚರಣೆಗಿಳಿದ ಭದ್ರತಾ ಪಡೆಯತ್ತ ಉಗ್ರರು ಗುಂಡು ಹಾರಿಸಿದರು. ಇದಕ್ಕೆ ಯೋಧರು ತಕ್ಕ ಪ್ರತ್ಯುತ್ತರ ನೀಡಿದರು. ಹತ್ಯೆಯಾಗಿರುವ ಉಗ್ರ ಯಾವ ಸಂಘಟನೆಗೆ ಸೇರಿದ್ದ ಎಂಬ ಬಗ್ಗೆ ತನಿಖೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

 

ಪ್ರತಿಕ್ರಿಯಿಸಿ (+)