ಶನಿವಾರ, ಜೂಲೈ 4, 2020
24 °C

ಜಮ್ಮು–ಕಾಶ್ಮೀರ: ಬಿಎಸ್‌ಎಫ್ ಯೋಧರ ಮೇಲೆ ಉಗ್ರ ದಾಳಿ, ಇಬ್ಬರು ಹುತಾತ್ಮ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಾಂಡಾಚ್ ಎಂಬಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧರ ಮೇಲೆ ಬುಧವಾರ ಸಂಜೆ ಉಗ್ರರು ದಾಳಿ ನಡೆಸಿದ್ದಾರೆ. ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದ್ವಿಚಕ್ರ ವಾಹನದಲ್ಲಿ ಬಂದ ಉಗ್ರರು ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಕಮಾಂಡರ್ ಒಬ್ಬನನ್ನು ಭದ್ರತಾ ಪಡೆಗಳು ಮಂಗಳವಾರ ಹತ್ಯೆ ಮಾಡಿದ್ದವು. ಮರುದಿನವೇ ಉಗ್ರ ದಾಳಿ ನಡೆದಿದೆ. ಇದೀಗ ಘಟನಾ ಸ್ಥಳವನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ 7 ವಾರಗಳಲ್ಲಿ ಕಾಶ್ಮೀರ ಕಣಿವೆಯಾದ್ಯಂತ ಸಿಆರ್‌ಪಿಎಫ್, ಬಿಎಸ್‌ಎಫ್‌ ಹಾಗೂ ರಾಜ್ಯ ಪೊಲೀಸ್‌ನ 27 ಸಿಬ್ಬಂದಿ ಉಗ್ರ ದಾಳಿಗಳಲ್ಲಿ ಹುತಾತ್ಮರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು