ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾರು ಸಾಕಷ್ಟು ಅಡಗಿಸಿಟ್ಟು ಕೊಂಡಿದ್ದಾರೋ ಅವರು ಸಿಬಿಐಗೆ ಹೆದರುತ್ತಾರೆ: ಜೇಟ್ಲಿ

Last Updated 17 ನವೆಂಬರ್ 2018, 13:53 IST
ಅಕ್ಷರ ಗಾತ್ರ

ಭೋಪಾಲ್ : ಯಾರು ಸಾಕಷ್ಟು ಅಡಗಿಸಿಟ್ಟು ಕೊಂಡಿದ್ದಾರೋ ಅವರು ಸಿಬಿಐಗೆ ಹೆದರುತ್ತಾರೆ ಎಂದುಹಣಕಾಸು ಸಚಿವ ಅರುಣ್‌ ಜೇಟ್ಲಿ ಚಂದ್ರಬಾಬು ನಾಯ್ಡು ಮತ್ತು ಮಮತಾ ಬ್ಯಾನರ್ಜಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತಪ್ಪು ಮಾಡಿದವರು ಮಾತ್ರ ಸಿಬಿಐ ಹೆಸರು ಕೇಳಿದರೆ ಬೆಚ್ಚಿ ಬೀಳುತ್ತಾರೆ. ಭ್ರಷ್ಟಾಚಾರ ವಿಷಯದಲ್ಲಿ ಯಾವುದೇ ರಾಜ್ಯಕ್ಕೂ ಸಾರ್ವಭೌಮತ್ವ ಇಲ್ಲ ಎಂದುಅರುಣ್‌ ಜೇಟ್ಲಿ ಹೇಳಿದರು.

ಸಿಬಿಐ ದಾಳಿ ಮತ್ತು ತನಿಖೆಗೆ ನೀಡಲಾಗಿದ್ದ ಮುಕ್ತ ಸಮ್ಮತಿಯನ್ನು ಆಂಧ್ರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸರ್ಕಾರ ಶುಕ್ರವಾರ ವಾಪಸ್‌ ಪಡೆದಿವೆ.

ಗರಿಷ್ಠ ಮುಖಬೆಲೆಯ ನೋಟುಗಳನ್ನು ಏಕಾಏಕಿ ಚಲಾವಣೆಯಿಂದ ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮ ರಾಜಕೀಯ ನಿಲುವು ಅಲ್ಲ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

ನೋಟು ರದ್ದತಿಯು ಎನ್‌ಡಿಎ ಸರ್ಕಾರ ತೆಗೆದುಕೊಂಡ ದಿಟ್ಟ ನೈತಿಕ ಹೆಜ್ಜೆ ಎಂದು ಅವರು ಬಣ್ಣಿಸಿದ್ದಾರೆ.

ನೋಟು ರದ್ದತಿಯ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವರಮಾನ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಅವರು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT