ಮಂಗಳವಾರ, ಫೆಬ್ರವರಿ 18, 2020
31 °C

ಕೇರಳದ ಕಾಸರಗೋಡಿನಲ್ಲಿ ಕೊರೊನಾ ವೈರಸ್‌ ಸೋಂಕು ತಗುಲಿದ ಮೂರನೇ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕೇರಳ (ಕಾಸರಗೋಡು): ಚೀನಾದಲ್ಲಿ ಮಾರಕ ಕೊರೊನಾ ವೈರಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ಕೇರಳದಲ್ಲಿ ಸೋಂಕು ತಗುಲಿರುವ ಮೂರನೇ ಪ್ರಕರಣ ಪತ್ತೆಯಾಗಿದೆ.

‘ಕಾಸರಗೋಡಿನ ಕಾಂಞಗಾಡ್ನ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪ್ರಾಥಮಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ’ ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ.  

ಸೋಂಕು ತಗುಲಿರುವ ವ್ಯಕ್ತಿ ಇತ್ತೀಚೆಗೆ ವುಹಾನ್‌ನಿಂದ ವಾಪಾಸ್ಸಾಗಿದ್ದರು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದ್ದು, ಚಿಕಿತ್ಸೆ ಮುಂದುವರಿದೆ.  

ಭಾರತದ ಮೊದಲೆರಡು ಕೊರೊನಾ ವೈರಸ್‌ ಪ್ರಕರಣಗಳೂ ಕೇರಳದಲ್ಲೇ ವರದಿಯಾಗಿತ್ತು. ವುಹಾನ್‌ನಿಂದ ಬಂದವರಲ್ಲಿಯೇ ಸೋಂಕು ಪತ್ತೆಯಾಗಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು