ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ಸಿಬ್ಬಂದಿಗೆ ಕೊರೊನಾ, ಬಿಎಸ್‌ಎಫ್‌ನಲ್ಲಿ ಸೋಂಕಿತರ ಸಂಖ್ಯೆ 223ಕ್ಕೆ ಏರಿಕೆ

Last Updated 8 ಮೇ 2020, 12:58 IST
ಅಕ್ಷರ ಗಾತ್ರ

ನವದೆಹಲಿ: ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) 30 ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಬಿಎಸ್‌ಎಫ್‌ನಲ್ಲಿ ಸೋಂಕಿತರ ಸಂಖ್ಯೆ 223ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಹೊಸದಾಗಿ ಸೋಂಕು ದೃಢಪಟ್ಟವರ ಪೈಕಿ 6 ಸಿಬ್ಬಂದಿ ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವವರು. ಇವರಲ್ಲಿ ಇಬ್ಬರು ಬಿಎಸ್‌ಎಫ್‌ ಪ್ರಧಾನ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆ ಇತರ ನಾಲ್ವರು ನಗರದ ಇತರೆಡೆಗಳಲ್ಲಿ ಕರ್ತವ್ಯದಲ್ಲಿದ್ದರು.

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪೈಕಿ ಈವರೆಗೆ ಬಿಎಸ್‌ಎಫ್‌ನಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ದೃಢಪಟ್ಟಿವೆ. ಒಟ್ಟಾರೆಯಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 500 ಮಂದಿಗೆ ಈವರೆಗೆ ಕೊರೊನಾ ತಗುಲಿದೆ.

ಬಿಎಸ್‌ಎಫ್‌ನಲ್ಲಿ ಒಟ್ಟು ಸೋಂಕಿತರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT