ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ರೈತರ ಪ್ರತಿಭಟನೆ; 10 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ
Last Updated 22 ನವೆಂಬರ್ 2018, 7:12 IST
ಅಕ್ಷರ ಗಾತ್ರ

ಮುಂಬೈ: ಸ್ವಾಮಿನಾಥನ್ ವರದಿ ಜಾರಿಗೆ, ಕನಿಷ್ಠ ಬೆಂಬಲ ಬೆಲೆ, ಬರ ಪರಿಹಾರ... ಹೀಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮಹಾರಾಷ್ಟ್ರದ ರೈತರು ಹಾಗೂ ಬುಡಕಟ್ಟು ಜನಾಂಗದವರು ದಾದಾರ್ ಎಂಬಲ್ಲಿ ಕೈಗೊಂಡಿರುವಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

ದಕ್ಷಿಣ ಮಹಾರಾಷ್ಟ್ರ, ವಿದರ್ಭ, ಅಹಮದ್‌ನಗರ ಸೇರಿದಂತೆ ನಾನಾ ಕಡೆಯಿಂದ ಬಂದು ಮುಂಬೈನ ಆಜಾದ್ ಮೈದಾನದಲ್ಲಿ ಸುಮಾರು 11 ಗಂಟೆಗೆ ಸೇರಿದ 10 ಸಾವಿರಕ್ಕೂ ಹೆಚ್ಚು ಮಂದಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಈ ಹೋರಾಟಕ್ಕೆ ಲೋಕ ಸಂಘರ್ಷ ಮೋರ್ಚಾ,ಆಮ್‌ಆದ್ಮಿ ಪಕ್ಷ ಹಾಗೂಕೆಲವು ಸಾಮಾಜಿಕಸಂಘಟನೆಗಳು ಬೆಂಬಲ ಸೂಚಿಸಿವೆ.

ಈ ವೇಳೆ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಜಲಸಂಪನ್ಮೂಲ ಸಚಿವ ಗಿರೀಶ್ ಮಹಾಜನ್, ‘ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ನಿಮ್ಮನ್ನು ಶೀಘ್ರವೇ ಭೇಟಿ ಮಾಡಲಿದ್ದಾರೆ. ನಿಮ್ಮ ಸಮಸ್ಯೆಗಳನ್ನು ಇತರ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಲಿದ್ದಾರೆ’ ಎಂಬ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT