ಶನಿವಾರ, ಜೂನ್ 25, 2022
24 °C

ಶ್ರೀನಗರ: ಮೂವರು‌ ಉಗ್ರರ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಸ್ಥಳೀಯ ಉಗ್ರರು ಹತ್ಯೆಯಾಗಿದ್ದು, ಸೇನಾಧಿಕಾರಿ ಸೇರಿ ಮೂವರು ಗಾಯಗೊಂಡಿದ್ದಾರೆ.

ಜಿಲ್ಲೆಯ ಝೈನಪೊರಾ ಪ್ರದೇಶದ ಮೆಲ್ಹೂರಾ ಎಂಬಲ್ಲಿ ಮಂಗಳವಾರ ಸಂಜೆ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರ ಹತ್ಯೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಉಗ್ರರು ಅಲ್‌ ಕೈದಾ ಅಂಗಸಂಸ್ಥೆಯಾದ ಅನ್ಸರ್‌ ಗಜ್ವತ್‌ –ಉಲ್‌ –ಹಿಂದ್‌ (ಎಯುಜಿಎಚ್‌) ಸಂಘಟನೆಗೆ ಸೇರಿದವರು
ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು