ಶುಕ್ರವಾರ, ಏಪ್ರಿಲ್ 10, 2020
19 °C

ಟ್ರಂಪ್ ಭೇಟಿ: ದೆಹಲಿ ಮೆಟ್ರೊ ಮೂರು ನಿಲ್ದಾಣಗಳು 20 ನಿಮಿಷ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮೆಟ್ರೊ ನೇರಳೆ ಮಾರ್ಗದ ಮೂರು ನಿಲ್ದಾಣಗಳನ್ನು ಮಂಗಳವಾರ 20 ನಿಮಿಷಗಳ ಕಾಲ ಮುಚ್ಚಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭದ್ರತೆ ಹಿನ್ನಲೆ ಈ ಕ್ರಮ ಕೈಗೊಳ್ಳಲಾಗಿದೆ.

ಮಂಡಿ ಹೌಸ್, ಐಟಿಒ ಮತ್ತು ದೆಹಲಿ ಗೇಟ್‌ ನಿಲ್ದಾಣಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿರುವುದಾಗಿ ಡಿಎಂಆರ್‌ಸಿ ಟ್ಟೀಟ್‌ ಮಾಡಿದೆ.

ಕೆಲ ಸಮಯದ ಬಳಿಕ ಮತ್ತೆ ಟ್ಟೀಟ್‌ ಮಾಡಿದ ಡಿಎಂಆರ್‌ಸಿ ಮೊಟ್ರೊ ನಿಲ್ದಾಣದ ಏಲ್ಲಾ ಬಾಗಿಲುಗಳನ್ನು ತೆರೆಯಲಾಗಿದೆ ಸಂಚಾರ ಸಾಮಾನ್ಯ ಸ್ಥಿತಿಗೆ ಬಂದಿದೆ ಎಂದು ತಿಳಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭದ್ರತೆಯ ದೃಷ್ಟಿಯಿಂದ ದೆಹಲಿ ಪೊಲೀಸರ ಕೋರಿಕೆಯ ಮೇರೆಗೆ ಮೆಟ್ರೊ ನಿಲ್ದಾಣವನ್ನು ಬಂದ್  ಮಾಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ರಾಜ್‌ ಘಾಟ್‌ನಲ್ಲಿರುವ ಗಾಂಧಿಯವರ ಸ್ಮಾರಕಕ್ಕೆ ಭೇಟಿ ನೀಡಿದ ಟ್ರಂಪ್ ದಂಪತಿಗಳು ಗೌರವ ಸಲ್ಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು