ಶುಕ್ರವಾರ, ಡಿಸೆಂಬರ್ 6, 2019
19 °C

ಹೈದರಾಬಾದ್ ಅತ್ಯಾಚಾರ ಪ್ರಕರಣ: ಮೂವರ ಪೊಲೀಸರು ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ದೂರು ದಾಖಲಿಸಲು ತಡ ಮಾಡಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಈ ಘಟನೆಯ ಕುರಿತು ರಾಷ್ಟ್ರದಾದ್ಯಂತ ಕಳವಳ, ಆತಂಕ ವ್ಯಾಪಕವಾಗಿ ವ್ಯಕ್ತವಾಗಿದ್ದಲ್ಲದೆ, ಶನಿವಾರ ಹೈದರಾಬಾದ್‌ನಲ್ಲಿ ಘಟನೆಯನ್ನು ಖಂಡಿಸಿ ಭಾರಿ ಪ್ರತಿಭಟನೆ ನಡೆಯಿತು. ಎಲ್ಲಾ ಬೆಳವಣಿಗೆಗಳ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸಂಬಂಧಿಸಿದ ಠಾಣೆಯ ಮೂವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.

ಬುಧವಾರ ರಾತ್ರಿ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಸಂತ್ರಸ್ತೆಯ ಕುಟುಂಬದವರು ದೂರು ನೀಡಿದರೂ ದಾಖಲಿಸದೆ ತಡ ಮಾಡಿದರು ಎಂದು ಆರೋಪಿಸಲಾಗಿದೆ. ಅಲ್ಲದೆ, ಠಾಣೆಯ ವ್ಯಾಪ್ತಿಯಲ್ಲಿ ಸರಿಯಾದ ಗಸ್ತು ವ್ಯವಸ್ಥೆ ಇಲ್ಲದೆ, ಲಾರಿ ಚಾಲಕರು ಎಲ್ಲೆಂದರಲ್ಲಿ ಲಾರಿಗಳನ್ನು ನಿಲ್ಲಿಸಿ ಅನೈತಿಕ ಚಟುವಟಿಕೆಗಳಲ್ಲಿ ತೊಡಗುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ. ಈ ಸಂಬಂಧ ಶನಿವಾರ ರಾತ್ರಿಯೇ ಮೂವರು ಸಿಬ್ಬಂದಿಯನ್ನು ಅಮಾನತುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು