ಲೋಕಸಭೆಯ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ ಸಾಧ್ಯತೆ

ಬುಧವಾರ, ಜೂಲೈ 17, 2019
29 °C

ಲೋಕಸಭೆಯ ನೂತನ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ ಸಾಧ್ಯತೆ

Published:
Updated:

ನವದೆಹಲಿ: ಲೋಕಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ಓಂ ಬಿರ್ಲಾ ಆಯ್ಕೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದ ಕೋಟ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಇವರು ಸರ್ವಾನುಮತದಿಂದ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಆಪ್ತರಾಗಿರುವ ಬಿರ್ಲಾ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ರಾಮ್‌ನಾರಾಯಣ್ ಮೀನಾ ವಿರುದ್ಧ 2.8 ಲಕ್ಷ ಮತಗಳಿಂದ ಜಯಗಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸಂಸದೀಯ ನಾಯಕನ ಆಯ್ಕೆ: ಇನ್ನೂ ಬಗೆಹರಿಯದ ಪ್ರಶ್ನೆ

1962ರ ನವೆಂಬರ್‌ನಲ್ಲಿ ಕೋಟದಲ್ಲಿ ಜನಿಸಿದ ಇವರು ಅಲ್ಲಿನ ಸರ್ಕಾರಿ ವಾಣಿಜ್ಯ ಕಾಲೇಜು ಮತ್ತು ಮಹರ್ಷಿ ದಯಾನಂದ ಸರಸ್ವತಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ವಾಣಿಜ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿರುವ ಬಿರ್ಲಾ ಅವರು ಲೋಕಸಭಾ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಿರುವ ಪ್ರಕಾರ ಕೃಷಿಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ.

ಸ್ಪೀಕರ್ ಆಗಿ ಎನ್‌ಡಿಎಯಿಂದ ಬಿರ್ಲಾ ಅವರನ್ನು ನಾಮನಿರ್ದೇಶನ ಮಾಡಿರುವುದಕ್ಕೆ ಅವರ ಪತ್ನಿ ಅಮಿತಾ ಬಿರ್ಲಾ ಸಂತಸ ವ್ಯಕ್ತಪಡಿಸಿದ್ದಾರೆ. ‘ಇದು ನಮಗೆ ಹೆಮ್ಮೆಯ ಮತ್ತು ಸಂತಸದ ವಿಚಾರ. ಅವರನ್ನು ನಾಮನಿರ್ದೇಶನ ಮಾಡುವ ನಿರ್ಧಾರ ಕೈಗೊಂಡದ್ದಕ್ಕೆ ಧನ್ಯವಾದಗಳು’ ಎಂದು ಅಮಿತಾ ಬಿರ್ಲಾ ಟ್ವೀಟ್ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !