ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರ | ರಕ್ಷಣಾ ಪಡೆಗಳಿಂದ ಕಾರ್ಯಾಚರಣೆ; ಮೂವರು ಉಗ್ರರ ಸೆರೆ!

Last Updated 25 ಜೂನ್ 2020, 2:57 IST
ಅಕ್ಷರ ಗಾತ್ರ

ಶ್ರೀನಗರ:ಉತ್ತರ ಕಾಶ್ಮೀರದ ಸೊಪೊರೆ ಪಟ್ಟಣ ಬಳಿಯ ಹರ್ದ್ಶಿವಾ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಹುಡುಕು ಕಾರ್ಯಾಚರಣೆ ನಡೆಸುವ ವೇಳೆ ರಕ್ಷಣಾ ಪಡೆಗಳ ವಿರುದ್ಧ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆ ಪ್ರತಿದಾಳಿ ನಡೆಸಿದೆ ಎಂದು ವರದಿಯಾಗಿದೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದರು. ಅದರಂತೆಸೇನೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ಕಾರ್ಯಾಚರಣೆ ಮುಂದುವರಿದಿದ್ದು, ಯಾವುದೇ ಪ್ರಾಣಹಾನಿಯ ವರದಿಯಾಗಿಲ್ಲ. ಇಬ್ಬರು ಅಥವಾ ಮೂವರು ಉಗ್ರರು ಸೆರೆಯಾಗಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT