ಶನಿವಾರ, ಮಾರ್ಚ್ 28, 2020
19 °C

ಕೇರಳ: 3 ವರ್ಷದ ಮಗುವಿಗೆ ಕೊರೊನಾ–19 ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎರ್ನಾಕುಲಂ: ಇಟಲಿಯಿಂದ ಕೇರಳಕ್ಕೆ ಮರಳಿದ್ದ ದಂಪತಿಯ 3 ವರ್ಷದ ಮಗುವಿಗೂ ಕೊರೊನಾ–19 ಸೋಂಕು ತಗುಲಿರುವುದು ದೃಢಪಟ್ಟಿದ್ದು ಭಾರತದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿದೆ.  

ಸೋಂಕಿತ ಮಗುವನ್ನು ಇಲ್ಲಿ ವೈದ್ಯಕೀಯ ಕಾಲೇಜಿನ ವಿಶೇಷ ವಾರ್ಡ್‌ನಲ್ಲಿ ತೀವ್ರ ನಿಗಾದಲ್ಲಿ ಇರಿಸಲಾಗಿದೆ.

ಈ ಮಧ್ಯೆ ಕೇರಳ ಸರ್ಕಾರ ವಿದೇಶಗಳಿಂದ ಮರಳಿದವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರುವಂತೆ ಮನವಿ ಮಾಡಿದೆ.

ಮಾರ್ಚ್‌ 7ರಂದು ಕೊಚ್ಚಿಗೆ ಬಂದಿದ್ದ ದಂಪತಿ ಮತ್ತು ಮಗುವನ್ನು ಪರೀಕ್ಷಿಸಲಾಯಿತು. ಮಗುವಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಗುವಿನ ಪೋಷಕರನ್ನು ತೀವ್ರ ನಿಗಾಘಟಕದಲ್ಲಿ ಇರಿಸಲಾಗಿದೆ ಎಂದು ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಕುಟ್ಟಪ್ಪನ್‌ ತಿಳಿಸಿದ್ದಾರೆ.

ಪತ್ತನಂತಿಟ್ಟ ಜಿಲ್ಲೆಯಲ್ಲಿ ಮೂರು ದಿನಗಳವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

'ಕೋವಿಡ್‌ 19’ ಸೋಂಕು ದೇಶದಲ್ಲಿ ವ್ಯಾಪಿಸುತ್ತಿದ್ದು ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು