ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕ್‌ ಟಾಕ್‌ ಆ್ಯಪ್ ನಿಷೇಧ: ಏ.15ಕ್ಕೆ ವಿಚಾರಣೆ

Last Updated 9 ಏಪ್ರಿಲ್ 2019, 12:50 IST
ಅಕ್ಷರ ಗಾತ್ರ

ನವದೆಹಲಿ:ಟಿಕ್‌ ಟಾಕ್‌ ಆ್ಯಪ್‌ ನಿಷೇಧಿಸಿರುವ ಮದ್ರಾಸ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಏಪ್ರಿಲ್‌ 15ಕ್ಕೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ತಿಳಿಸಿದೆ.

ಭಾರತದ ಯುವ ಸಮೂಹವನ್ನು ಆಕರ್ಷಿಸುತ್ತಿರುವ ಚೀನಾದ ಬೈಟ್‌ಡಾನ್ಸ್‌ ಕಂಪನಿಯ ಟಿಕ್‌ ಟಾಕ್‌ಮೊಬೈಲ್ ಆ್ಯಪ್‌ ಡೌನ್‌ಲೋಡ್‌ ಮಾಡುವುದನ್ನು ನಿಷೇಧ ಮಾಡುವಂತೆ ಮದ್ರಾಸ್‌ ಹೈಕೋರ್ಟ್‌ ಏಪ್ರಿಲ್‌ 3ರಂದು ಕೇಂದ್ರ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿತ್ತು.ಇದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

‘ಅಶ್ಲೀಲ ಮತ್ತು ಅಸಭ್ಯ ವಿಡಿಯೊಗಳು ಈ ಆ್ಯಪ್‌ನಲ್ಲಿವೆ. ಈ ಆ್ಯಪ್‌ನಿಂದ ತಯಾರಾಗುತ್ತಿರುವ ವಿಡಿಯೊಗಳು ವ್ಯಕ್ತಿಯ ಖಾಸಗಿತನವನ್ನು ಹರಣ ಮಾಡುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದ ಮದ್ರಾಸ್‌ ಹೈಕೋರ್ಟ್‌, ಟಿಕ್‌ ಟಾಕ್‌ನಿಂದ ಮಾಡಲಾದ ವಿಡಿಯೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೂ ಸೂಚನೆ ನೀಡಿತ್ತು.

ಇನ್ನಷ್ಟು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT